ವಿಮಾನದಲ್ಲಿ ಸಿಗರೇಟ್‌ ಸೇದಿದ ಬಾಬಿ ಕಟಾರಿಯಾ: ಪ್ರತಿಕ್ರಿಯಿಸಿದ ವಿಮಾನಯಾನ ಸಚಿವರು, ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಸೋಷಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿರುವ ಬಾಬಿ ಕಟಾರಿಯಾ…ವಿಮಾನದಲ್ಲಿ ಧೂಮಪಾನ ಮಾಡಿರುವ ವಿಡಿಯೋ ಇದೀಗ ಸಂಚಲನ ಮೂಡಿಸಿದೆ. ಹರಿಯಾಣ ಮೂಲದ ಬಲ್ವಿಂದರ್ ಕಟಾರಿಯಾ ಅಲಿಯಾಸ್ ಬಾಬಿ ಕಟಾರಿಯಾ ಇನ್‌ಸ್ಟಾಗ್ರಾಮ್‌ನಲ್ಲಿಸುಮಾರು ಆರೂವರೆ ಲಕ್ಷ ಫಾಲೋವರ್ಸ್ ಹೊಂದಿದ್ದು, ಸಖತ್‌ ಫೇಮಸ್‌ ಆಗಿದ್ದಾರೆ.

ಕಳೆದ ಜನವರಿ 23ರಂದು ದುಬೈ-ದೆಹಲಿ ಸ್ಪೈಸ್ ಜೆಟ್ ವಿಮಾನದಲ್ಲಿ ಸೀಟ್‌ ಮೇಲೆ ಮಲಗಿ ಸಿಗರೇಟ್ ಸೇದಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ವೈರಲ್ ಆಗಿದೆ. ವಿಮಾನದಲ್ಲಿ ಅನುಚಿತವಾಗಿ ಮತ್ತು ಬೇಜವಾಬ್ದಾರಿಯಿಂದ ವರ್ತಿಸಿದ್ದಕ್ಕಾಗಿ ನೆಟ್ಟಿಗರು ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಟ್ಯಾಗ್ ಮಾಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ಇದಕ್ಕೆ ಜ್ಯೋತಿರಾದಿತ್ಯ ಸಿಂಧಿಯಾ ಪ್ರತಿಕ್ರಿಯಿಸಿದ್ದು, ಘಟನೆಯ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಬಾಬಿ ಕಟಾರಿಯಾ ಈ ಹಿಂದೆಯೂ ಇಂಥದ್ದೇ ಕೆಲ ಕೆಲಸಗಳನ್ನು ಮಾಡಿ ವಿವಾದಗಳಲ್ಲಿ ಭಾಗಿಯಾಗಿದ್ದರು. ಇತ್ತೀಚೆಗೆ ಡೆಹ್ರಾಡೂನ್ ರಸ್ತೆಯ ಮಧ್ಯದಲ್ಲಿ ಕುರ್ಚಿ ಮೇಲೆ ಕುಳಿತು ಮದ್ಯಪಾನ ಮಾಡಿದ್ದರು.

ವಿಮಾನಗಳಲ್ಲಿ ಧೂಮಪಾನವನ್ನು ನಿಷೇಧಿಸಲಾಗಿದೆ. ಬೆಂಕಿ ಹಚ್ಚುವುದರಿಂದ ಅಪಘಾತ ಸಂಭವಿಸುವ ಸಾಧ್ಯತೆಯಿದ್ದು, ಪ್ರಯಾಣಿಕರ ಜೀವದ ಜೊತೆ ಚಲ್ಲಾಟ ಆಡಿದಂತೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಲವರು ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!