ಹೊಸದಿಗಂತ ವರದಿ ಹುಬ್ಬಳ್ಳಿ:
ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಅವರನ್ನು ಪೊಲೀಸರು ವಶಕ್ಕೆ ಪಡೆಯುವ ಸಮಯ ಮೊಬೈಲ್ ನಲ್ಲಿ ಆ ದೃಶ್ಯಗಳ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಕುರಿತು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.
ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದ್ದು, ಕೇಶ್ವಾಪುರ ಪೊಲೀಸ್ ಠಾಣೆಯ ಪಿಎಸ್ ಐ ಬಾಬಾ ಎಂ. ದೂರು ದಾಖಲಿಸಿದ್ದಾರೆ. ಸುಜಾತ ಹಂಡಿ ಅವರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ ಅವರೇ ತಮ್ಮ ಮೈ ಮೇಲಿದ್ದ ವಸ್ತ್ರವನ್ನು ಬಿಚ್ಚಿದ್ದಾರೆ.
ಈ ವೇಳೆ ಯಾರೋ ಆ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಿ, ಸುಜಾತ ಅವರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸುಜಾರ ಹಂಡಿ ವಶಕ್ಕೆ ಪಡೆಯುವ ವಿಡಿಯೋ ವೈರಲ್: ಮತ್ತೊಂದು ಪ್ರಕರಣ ದಾಖಲು

