Sunday, March 26, 2023

Latest Posts

ಮೆಟ್ರೋ ರೈಲಿನಲ್ಲಿ ವಿಡಿಯೋ ರೆಕಾರ್ಡ್ ನಿಷೇಧ!

ಹೊಸದಿಗಂತ ಡಿಜಿಟಲ್ ಡೆಸ್ಕ್

ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್ (ಡಿಎಂಆರ್‌ಸಿ) ಕೋಚ್‌ಗಳಲ್ಲಿ ವೀಡಿಯೊಗಳನ್ನು ರೆಕಾರ್ಡ್ ಮಾಡುವುದನ್ನು ನಿಷೇಧಿಸಿದೆ.

ಇತ್ತೀಚಿನ ದಿನಗಳಲ್ಲಿ ಮೆಟ್ರೋ ಕೋಚ್‌ಗಳಲ್ಲಿ ಇನ್‌ಸ್ಟಾಗ್ರಾಮ್ ರೀಲ್ ಮಾಡುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಇದರಿಂದ ಸಹ ಪ್ರಯಾಣಿಕರಿಗೆ ತೊಂದರೆ ಮತ್ತು ಅನಾನುಕೂಲತೆಯ ಮೂಲವಾಗಿದೆ.

ಇದೇ ಕಾರಣಕ್ಕೆ ಮೆಟ್ರೋ ಕೋಚ್‌ಗಳಲ್ಲಿ ವೀಡಿಯೊಗಳನ್ನು ಚಿತ್ರೀಕರಿಸಬೇಡಿ ಎಂದು ಡಿಎಂಆರ್‌ಸಿ ಪ್ರಯಾಣಿಕರಿಗೆ ಪದೇ ಪದೇ ಎಚ್ಚರಿಕೆ ನೀಡುತ್ತಿದೆ. ಇದರ ಹೊರತಾಗಿಯೂ ಯಾವುದೇ ಪ್ರಯೋಜನವಾಗುತ್ತಿಲ್ಲ.

ಇದೀಗ ಮತ್ತೆ ಪ್ರಯಾಣಿಕರಿಗೆ ಅನಾನುಕೂಲತೆಯನ್ನು ಉಂಟುಮಾಡುವ ರೀಲ್‌ಗಳು, ನೃತ್ಯ ವೀಡಿಯೊಗಳು ಅಥವಾ ಅಂತಹ ಯಾವುದೇ ಚಟುವಟಿಕೆಗಳನ್ನು ದೆಹಲಿ ಮೆಟ್ರೋ ಒಳಗೆ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಬರೆದಿರುವ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!