ಉಗ್ರ ಸಂಘಟನೆ ಮುಖ್ಯಸ್ಥನಿಂದ ವಿಡಿಯೋ ಬಿಡುಗಡೆ: ಪೊಲೀಸ್ ತನಿಖೆಗೆ ಸಿಎಂ ಬೊಮ್ಮಾಯಿ ಸೂಚನೆ

ಹೊಸದಿಗಂತ ವರದಿ,ಮೈಸೂರು:

ಅಲ್ ಖೈದಾ ಉಗ್ರ ಸಂಘಟನೆ ಮುಖ್ಯಸ್ಥ ಬಿಡುಗಡೆ ಮಾಡಿರುವ ವಿಡಿಯೋ ಬಗ್ಗೆ ತನಿಖೆ ನಡೆಸಿ, ವರದಿ ನೀಡಲು ಪೊಲೀಸರಿಗೆ ಸೂಚನೆ; ಸಿಎಂ ಬಸವರಾಜ ಬೊಮ್ಮಾಯಿ
ಮಂಡ್ಯದ ಯುವತಿ ಮಸ್ಕಾನ್ ಬಗ್ಗೆ ಅಲ್ ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥ ಹೊಗಳಿ ಬಿಡುಗಡೆ ಮಾಡಿರುವ ವಿಡಿಯೋದ ಸತ್ಯತೆ ಬಗ್ಗೆ ತನಿಖೆ ನಡೆಸಿ, ವರದಿ ನೀಡಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಗುರುವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಅಲ್ ಖೈದಾ ಉಗ್ರ ಸಂಘಟನೆ ಮುಖ್ಯಸ್ಥ ಹೇಳಿಕೆ ನೀಡಿದರೆ ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ಯಾಕೇ ಗಲಿಬಿಲಿ. ಸಿದ್ದರಾಮಯ್ಯನವರ ಈ ಹೇಳಿಕೆ ಯಾವುದೇ ಲಾಜೀಕ್ ಇಲ್ಲ, ಆಧಾರವೂ ಇಲ್ಲ, ಹೂಲಿಕೆಯಾಗದ ಹೇಳಿಕೆ ಎಂದು ಟಾಂಗ್ ನೀಡಿದರು. ಈ ನೆಲದ ಮತ್ತು ಕಾನೂನಿನ ವಿರುದ್ಧ ನಿರಂತರ ಷಡ್ಯಂತ್ರ ನಡೆದಿವೆ. ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಹೇಳಿಕೆಗೆ ಆಲ್ ಖೈದಾ ಬೆಂಬಲ ನೀಡಿರುವ ವಿಚಾರದ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದ್ದೇನೆ. ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ದೆಹಲಿ ಪ್ರವಾಸ ಯಶಸ್ವಿಯಾಗಿದೆ. ವಿದ್ಯುತ್ , ಜಲಸಂಪನ್ಮೂಲ, ಹಣಕಾಸು ಇಲಾಖೆ ಸಂಬoಧಿಸಿದoತೆ ಕೇಂದ್ರದಿoದ ರಾಜ್ಯದ ಅಭಿವೃದ್ಧಿ ಕೆಲಸಗಳ ಚರ್ಚೆ ನಡೆಸಿದ್ದೇನೆ. ಅನೇಕ ವಿಚಾರಗಳ ಕುರಿತು ಚರ್ಚಿಸಿದ್ದೇನೆ. ಬೇಡಿಕೆಗಳಿಗೆ ಕೇಂದ್ರದಿoದ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಬರುವ ದಿನಗಳಲ್ಲಿ ಹಲವಾರು ಯೋಜನೆಗಳಿಗೆ ಮಂಜೂರಾತಿ, ಪರವಾನಗಿ ಸಿಗಲಿದೆ ಎಂದರು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಥೂಲ ಚರ್ಚೆ ಮಾಡಿದ್ದೇನೆ. ಸಚಿವ ಸಂಪುಟವನ್ನು ಪುನರ್ ರಚನೆ ಮಾಡಬೇಕೋ, ಅಥವಾ ವಿಸ್ತರಣೆ ಮಾಡಬೇಕೋ ಎಂಬುದರ ಬಗ್ಗೆ ರಾಜ್ಯದಲ್ಲಿ ಈ ತಿಂಗಳು ನಡೆಯುವ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತಾತ್ವಿಕವಾಗಿ ನಿರ್ಧಾರವಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಈ ವೇಳೆ ಸಚಿವ ಎಸ್.ಟಿ.ಸೋಮಶೇಖರ್, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!