ಆಸ್ಪತ್ರೆಯಲ್ಲಿ ರೋಗಿಗಳು ಮಲಗುವ ಬೆಡ್ ಮೇಲೆ 2ಶ್ವಾನಗಳ ರೆಸ್ಟ್: ಸಿಬ್ಬಂದಿ ವಿರುದ್ಧ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಗೆ ನಾಯಿಗಳು ಕಾಲಿಟ್ಟಿರುವುದು ಸಂಚಲನ ಮೂಡಿಸಿದೆ. ರೋಗಿಗಳ ಹಾಸಿಗೆಯ ಮೇಲೆ ಎರಡು ನಾಯಿಗಳು ಆರಾಮವಾಗಿ ಮಲಗಿರುವ ಫೋಟೋ, ವಿಡಿಯೋಗಳು ವೈರಲ್ ಆಗುತ್ತಿವೆ. ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯ ಧೋರಣೆ ಎಷ್ಟರಮಟ್ಟಿಗೆ ಇದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಆಸ್ಪತ್ರೆ ಸಿಬ್ಬಂದಿ ರೋಗಿಗಳ ಪ್ರಾಣದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂಬ ತೀವ್ರ ಟೀಕೆ ವ್ಯಕ್ತವಾಗಿದೆ.

ಮಧ್ಯಪ್ರದೇಶದ ಜಬಲ್‌ಪುರ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಗರ್ಭಿಣಿ ಪತ್ನಿಯನ್ನು ಚಿಕಿತ್ಸೆಗೆಂದು ಕರೆತಂದ ಸಿದ್ಧಾರ್ಥ್ ಜೈನ್ ಎಂಬ ವ್ಯಕ್ತಿ ಆಸ್ಪತ್ರೆಯ ಬೆಡ್ ಮೇಲೆ ನಾಯಿಗಳು ಮಲಗಿರುವುದನ್ನು ಗಮನಿಸಿ ವಿಡಿಯೋ ತೆಗೆದಾಗ ವಿಷಯ ಬೆಳಕಿಗೆ ಬಂದಿದೆ. ಈ ವಿಷಯ ತಿಳಿದ ಅಧಿಕಾರಿಗಳು ಆಸ್ಪತ್ರೆಗೆ ನಾಯಿಗಳು ನುಗ್ಗುತ್ತಿರುವ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಜಬಲ್ಪುರದ ಮುಖ್ಯ ವೈದ್ಯಾಧಿಕಾರಿ ಡಾ.ಸಂಜಯ್ ಮಿಶ್ರಾ, ಬಿಎಂಒ ಡಾ.ಸಿ.ಕೆ.ಅತ್ರಾಲಿಯಾ ಅವರಿಗೆ ನೋಟಿಸ್ ಜಾರಿ ಮಾಡಿದ್ದೇವೆ. ಆಸ್ಪತ್ರೆಗೆ ನಾಯಿಗಳು ನುಗ್ಗುತ್ತಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಆ ವೇಳೆ ಕರ್ತವ್ಯ ನಿರ್ವಹಿಸುವ ವೈದ್ಯಕೀಯ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು. ಈ ಹಿಂದೆ ಮಧ್ಯಪ್ರದೇಶದ ರತ್ಲಂನಲ್ಲಿ ಇಂತಹದ್ದೇ ಘಟನೆ ನಡೆದಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!