ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೃಹ ಸಚಿವ ಅಮಿತ್ ಶಾ ಅವರ ರಾಜ್ಯಸಭಾ ಭಾಷಣದ ವಿಡಿಯೋ ಅಪ್ಲೋಡ್ ಮಾಡಿದ ಕಾಂಗ್ರೆಸ್ ನಾಯಕರಿಗೆ ಎಕ್ಸ್ ಎಚ್ಚರಿಕೆ ನೀಡಲಾಗಿದೆ.
ಕೇಂದ್ರ ಗೃಹ ಸಚಿವಾಲಯದ ಸೂಚನೆಯ ಮೇರೆಗೆ ಎಕ್ಸ್‌ನಿಂದ ನೋಟಿಸ್ ಬಂದಿದೆ ಎಂದು ಕಾಂಗ್ರೆಸ್ ಮೂಲಗಳನ್ನು ಆಧಾರಿಸಿ ವರದಿಯಾಗಿದೆ.
ಬುಧವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿದ ಅಮಿತ್ ಶಾ, ಹಿಂದೆ ನರೇಂದ್ರ ಮೋದಿ ಅವರ ಭಾಷಣವನ್ನು ತಿರುಚಿ ಪ್ರಸಾರ ಮಾಡಲಾಗಿತ್ತು. ನನ್ನ ಭಾಷಣದ ವಿಡಿಯೋವನ್ನು ತಿರುಚಿ ಪ್ರಸಾರ ಮಾಡಲಾಗಿದೆ. ಅಪ್ಲೋಡ್ ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.