ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದ ಹೊಳೆ, ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಕಾಂಗ್ರಾ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ನೀರಿನಿಂದ ಚಕ್ರಿ ರೈಲ್ವೆ ಸೇತುವೆ ಕುಸಿದಿದೆ. ಇದಕ್ಕೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಚಕ್ರಿ ರೈಲ್ವೇ ಸೇತುವೆಯ ಪಿಲ್ಲರ್ ಸಂಪೂರ್ಣ ನಾಶವಾಗಿದ್ದು, ಭಾರೀ ಮಳೆಯಿಂದಾಗಿ ಧರ್ಮಶಾಲಾದಲ್ಲಿ ಭೂಕುಸಿತ ಉಂಟಾಗಿದೆ.
#WATCH | Himachal Pradesh: The railway bridge on Chakki river in Himachal Pradesh's Kangra district damaged due to flash flood, and collapsed today morning. The water in the river is yet to recede: Northern Railways pic.twitter.com/ApmVkwAkB8
— ANI (@ANI) August 20, 2022
ಮಂಡಿ ಜಿಲ್ಲೆಯಲ್ಲಿ ಭಾರೀ ಪ್ರವಾಹ ಉಂಟಾಗಿದೆ. ಅಪಾರ ಪ್ರಮಾಣದ ನೀರು ಅಂಗಡಿ, ಮನೆಗಳಿಗೆ ನುಗ್ಗಿದೆ. ರಸ್ತೆಯಲ್ಲಿ ನಿಂತಿದ್ದ ವಾಹನಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಕಾಂಗ್ರಾ, ಕುಲು ಮತ್ತು ಮಂಡಿ ಜಿಲ್ಲೆಗಳಲ್ಲಿ ಶಾಲೆಗಳು ಮತ್ತು ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ಅನಗತ್ಯ ಪ್ರಯಾಣ ಮಾಡದಂತೆ ಜನರಿಗೆ ಸೂಚಿಸಲಾಗಿದೆ. ಹಿಮಾಚಲ ಪ್ರದೇಶ ವಿಪತ್ತು ನಿರ್ವಹಣಾ ಇಲಾಖೆಯು ಆಗಸ್ಟ್ 25 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ಭೂಕುಸಿತದ ಭೀತಿಯಿದೆ ಎಂದು ಹೇಳಿದೆ.