ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೂನ್ 13ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಇದ್ರಲ್ಲಿ ಕಾಂಗ್ರೆಸ್‌ನ 7 ಸ್ಥಾನಗಳ ಪೈಕಿ ಒಂದು ಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ಅವಿರೋಧ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.
ಯತೀಂದ್ರ ಅವರ ಉಮೇದುವಾರಿಕೆಯನ್ನು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅನುಮೋದಿಸಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೆಹಲಿ ಭೇಟಿ ವೇಳೆ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಹೈಕಮಾಂಡ್ ನಾಯಕರ ಬಳಿ ಚರ್ಚೆ ನಡೆಸಿದ್ದು, ಈ ವೇಳೆ ಯತೀಂದ್ರ ಸಿದ್ದರಾಮಯ್ಯ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇನ್ನು ಉಳಿದ 6 ಕ್ಷೇತ್ರಗಳಿಗೆ ಪೈಪೋಟಿ ಹೆಚ್ಚಾಗಿದೆ .
ಈ ಬಾರಿ 7 ಸ್ಥಾನಗಳಿಗೆ 65 ಮಂದಿ ಆಕಾಂಕ್ಷಿಗಳ ಶಾರ್ಟ್ ಲಿಸ್ಟ್ ಸಿದ್ಧಪಡಿಸಲಾಗಿದ್ದು, ಇದರಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಕ್ಷೇತ್ರ ಬಿಟ್ಟುಕೊಟ್ಟ ಯತೀಂದ್ರಗೆ ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಮಾನ ನೀಡುವುದಾಗಿ ಕಾಂಗ್ರೆಸ್ ಹೈಕಮಾಂಡ್ ಈ ಹಿಂದೆ ಹೇಳಿತ್ತು. ಅದರಂತೆ ಯತೀಂದ್ರ ಅವರಿಗೆ ಟಿಕೆಟ್ ಪಟ್ಟ ಎನ್ನಲಾಗಿದೆ.