ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಬಳಿಕ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಒಟ್ಟು 11ರಲ್ಲಿ ಏಳು ಸ್ಥಾನಗಳು ಕಾಂಗ್ರೆಸ್ಗೆ ಸಿಗಲಿದ್ದು, ಆ ಸ್ಥಾನಗಳಿಗೆ ಇದೀಗ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ಇದರಿಂದ ಹೈಕಮಾಂಡ್ ಅಭ್ಯರ್ಥಿಗಳ ಪೈಕಿ ಏಳು ಮಂದಿಯನ್ನು ಆಯ್ಕೆ ಮಾಡಿ ಶಾರ್ಟ್‌ಲಿಸ್ಟ್‌ಗೆ ಸೇರಿಸಿದೆ. ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು, ವಸಂತಕುಮಾರ್, ಜಗದೇವ್ ಗುತ್ತೇದಾರ್, ಐವನ್ ಡಿಸೋಜಾ ಮತ್ತು ಬಿಲ್ಕಿಸ್ ಬಾನೊ ಅವರನ್ನು ಘೋಷಿಸಲಾಗಿದೆ. ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಅವರನ್ನ ಆಯ್ಕೆ ಮಾಡಿದೆ.