ವಿಧಾನ ಪರಿಷತ್: ಕಾಂಗ್ರೆಸ್ ಸರ್ಕಾರ ಕಡೆಗಣಿಸಿ, ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸಿ ಜನರಲ್ಲಿ ಜೋಶಿ ಮನವಿ

ಹೊಸದಿಗಂತ ಬೀದರ್:

ಈಶಾನ್ಯ ವಲಯ ಪದವಿಧರರ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಅಮರನಾಥ ಪಾಟೀಲ್ ಪರ ಪ್ರಚಾರಕ್ಕೆ ನಗರದ ಲಾವಣ್ಯ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ, ಬರವಿದ್ದಾಗ ಕೇಂದ್ರದಿಂದ ಬಂದ ಹಣ ರೈತರಿಗೆ ಕೋಡದೇ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ನಿಂತು ಹೋಗಿದ್ದು, ಸರಕಾರಿ ನೌಕರರಿಗೆ ಸಿಗಬೇಕಾದ 7ನೇ ವೇತನದ ಬಗ್ಗೆಯೂ ಮಾತನಾಡುತ್ತಿಲ್ಲ ಆಡಳಿತದ ದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಹೇಳಿದರು.

ಪದವಿಧರರ ಬೆಂಬಲದಿಂದ ಈ ಭಾಗದ ಜನರ ಧ್ವನಿಯಾಗಿ ವಿಧಾನ ಪರಿಷತ್ ನಲ್ಲಿ ಪ್ರತಿನಿಧಿಸಲು ಅಮರನಾಥ ಪಾಟೀಲ್ ಇವರು ಜನಪರ ಕಾಳಜಿ ಇರುವ ಸೂಕ್ತ ವ್ಯಕ್ತಿ, ಪ್ರಧಾನಿ ಮೋದಿ ಅವರ ದೇಶದಲ್ಲಿಯ ಜನಪರ ಆಡಳಿತ ಬಿಜೆಪಿ ಅಭ್ಯರ್ಥಿಗಳಿಗೆ ಬೆನ್ನೆಲುಬು ಹಾಗೂ ಭಾರತೀಯ ಜನತಾ ಪಕ್ಷದ ರಾಮರಾಜ್ಯದ ಸಿದ್ಧಾಂತ ಬೆಂಬಲಿಸಿ ಬಿಜೆಪಿ ಅಭ್ಯರ್ಥಿಗೆ ಹೆಚ್ಚಿನ ಅಂತರದಿಂದ ಗೆಲ್ಲಿಸಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಭಾಗ ಪ್ರಮುಖ ಈಶ್ವರ ಸಿಂಗ್ ಠಾಕೂರ್, ಶಿವಾನಂದ ಮಂಠಾಳಕರ,ರಾಜಶೇಖರ ನಾಗಮುರ್ತಿ ಹೇಮಲತಾ ಜೋಶಿ ವ್ಹಿ. ಕೆ. ದೇಶಪಾಂಡೆ, ಜಿಲ್ಲಾ ಬಿಜೆಪಿ ಘಟಕದ ಪ್ರಮುಖರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!