ವಿಧಾನಪರಿಷತ್‌ನ ನೈರುತ್ಯ ಶಿಕ್ಷಕರ ಕ್ಷೇತ್ರದ ಫಲಿತಾಂಶ: ಎಸ್.ಎಲ್.ಭೋಜೇಗೌಡಗೆ ಭರ್ಜರಿ ಗೆಲುವು

ಹೊಸದಿಗಂತ ಡಿಜಿಟಲ್ ಡೆಸ್ಕ್ : 

ವಿಧಾನಪರಿಷತ್‌ನ ಪದವೀಧರರು, ಶಿಕ್ಷಕರ ಕ್ಷೇತ್ರಗಳಿಗೆ ನಡೆದಿದ್ದ ಚುನಾವಣೆಯಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಮೊದಲ ಪ್ರಾಶಸ್ತ್ಯ ಮತದಲ್ಲೇ ಎಸ್.ಎಲ್.ಭೋಜೇಗೌಡ ಗೆಲುವು ಸಾಧಿಸಿದ್ದಾರೆ.

ಮತ ಎಣಿಕೆ ಪ್ರಕ್ರಿಯೆ ಸಂಪೂರ್ಣ ಮುಕ್ತಾಯಗೊಂಡಿದ್ದು, 5267 ಮತಗಳ ಭಾರಿ ಅಂತರದಿಂದ ಭೋಜೇಗೌಡ ಗೆಲುವು ಸಾಧಿಸಿದ್ದಾರೆ. ಒಟ್ಟು ಚಲಾವಣೆ ಆಗಿದ್ದ ಮತ 19479 ಆಗಿವೆ. ಕುಲಗೆಟ್ಟ ಮತಗಳ ಸಂಖ್ಯೆ 821, 18658 ಸಿಂಧು ಮತಗಳು ಆಗಿವೆ .

9,829 ಮತಗಳ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಎಸ್.ಎಲ್ ಭೋಜೇಗೌಡ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಕುಮಾರ್ ಗೆ 4562 ಮತಗಳನ್ನು ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!