ವಿಧಾನ ಪರಿಷತ್‌ ಟಿಕೆಟ್‌: ಎಲ್ಲರಿಗೂ ಆಕಾಂಕ್ಷೆ ಇರತ್ತೆ, ಅವಕಾಶ ಕೊಡಕ್ಕಾಗೋದಿಲ್ಲ ಎಂದ ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ವಿಧಾನ ಪರಿಷತ್ ಚುನಾವಣೆ ಟಿಕೆಟ್‌ಗೆ ಕಾಂಗ್ರೆಸ್‌ಗೆ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆಯ ಮಾನದಂಡವನ್ನು ಪಕ್ದ ಹೈಕಮಾಂಡ್ ನಾಯಕರು ತೀರ್ಮಾನಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮಾಧ್ಯಮಗಳ ಜತೆ ಮಾತನಾಡಿದ ಅವರು, ಪರಿಷತ್ತಿನ 7 ಸ್ಥಾನಗಳಿಗೆ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಎಲ್ಲಾ ವರ್ಗದಲ್ಲೂ ಆಕಾಂಕ್ಷಿಗಳಿದ್ದು, ಎಲ್ಲರಿಗೂ ಅವಕಾಶ ನೀಡಲು ಸಾಧ್ಯವಿಲ್ಲ ಎಂದರು.

ಕರಾವಳಿ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಹಳೇ ಮೈಸೂರು ಸೇರಿ ಎಲ್ಲರಿಂದ ಅವಕಾಶ ನೀಡಬೇಕು ಎಂಬ ಬೇಡಿಕೆ ಇದೆ. ಕೆಲವು ಸ್ಥಾನಗಳಲ್ಲಿ ಹಾಲಿ ಸದಸ್ಯರು ಇದ್ದಾರೆ. ಹಾಗಾಗಿ ಕಷ್ಟದ ಸ್ಥಿತಿ ಎಂದರು.

ಸಿಎಂ,ಡಿಸಿಎಂ, ಅವರೇ ಎಲ್ಲ ತೀರ್ಮಾನ ಮಾಡಬಾರದು ಎನ್ನುವ ಪರಮೇಶ್ವರ್ ಅವರ ಹೇಳಿಕೆ ಕೇಳಿದಾಗ, ಖಂಡಿತ ನಾವು ಅವರ ಅಭಿಪ್ರಾಯವನ್ನು ಕೇಳುತ್ತೇವೆ ಎಂದರು. ವಾಲ್ಮೀ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಕುರಿತು ಮಾತನಾಡಿ, ಈ ವಿಚಾರವನ್ನು ಪತ್ರಿಕೆಯಲ್ಲಿ ಓದಿದೆ, ಇದರ ಮಾಹಿತಿ ತಿಳಿದು, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!