ಇನ್ಮುಂದೆ ವರ್ಣರಂಜಿತ ಲೈಟಿಂಗ್ಸ್ ಗಳಿಂದ ಕಂಗೊಳಿಸಲಿದೆ ವಿಧಾನಸೌಧ: ಶಾಶ್ವತ ವಿದ್ಯುತ್ ದೀಪಾಲಂಕಾರ ಸಿಎಂ ಚಾಲನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು.

Imageಈ ಮುಂಚೆ ರಾಷ್ಟ್ರೀಯ ಹಬ್ಬ ಹಾಗೂ ವಿಶೇಷ ಸಂದರ್ಭಗಳಲ್ಲಿ ಮಾತ್ರ ವಿಧಾನಸೌಧಕ್ಕೆ ದೀಪಾಲಂಕಾರದ ವ್ಯವಸ್ಥೆ ಕಲ್ಪಿಸಲಾಗುತ್ತಿತ್ತು. ಇಂದಿನಿಂದ ಶಾಶ್ವತ ದೀಪಾಲಂಕಾರದ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಶನಿವಾರ ಮತ್ತು ಭಾನುವಾರ ವರ್ಣರಂಜಿತ ವಿದ್ಯುತ್​​​​ ದೀಪಗಳಿಂದ ಶಕ್ತಿ ಕೇಂದ್ರ ಕಂಗೊಳಿಸಲಿದೆ.

ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ ಉದ್ಘಾಟಿಸಿ ಮಾತನಾಡಿದ ಸಿಎಂ, ಸಂಸತ್ತು, ವಿಧಾನಸೌಧ ಜನರ ಮತ್ತು ರಾಜ್ಯದ ಹಾಗೂ ದೇಶದ ಸಮಸ್ಯೆಗಳನ್ನು ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ದೇಗುಲಗಳು. ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತನ್ನು ಪ್ರತಿಯೊಬ್ಬರೂ ಸಾರ್ಥಕಗೊಳಿಸುವ ರೀತಿಯಲ್ಲಿ ಕೆಲಸ ಮಾಡಿ ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಬೇಕು ಎಂದರು.

Imageವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ ಅಳವಡಿಸಲು ಕಾಳಜಿ ವಹಿಸಿ ಕಾರ್ಯಗತ ಮಾಡಿದ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Image

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!