PUC | ರಾಜ್ಯಕ್ಕೇ ಫಸ್ಟ್‌ ಬಂದಿರುವ ವಿದ್ಯಾಲಕ್ಷ್ಮೀ ಎಸ್‌ಎಸ್‌ಎಲ್‌ಸಿಯಲ್ಲೂ 97 ಪರ್ಸೆಂಟ್‌!

ಹೊಸದಿಗಂತವರದಿ ಹುಬ್ಬಳ್ಳಿ:

ವಾಣಿಜ್ಯ ನಗರಿ ಹುಬ್ಬಳ್ಳಿ ವಿದ್ಯಾರ್ಥಿನಿ ಎ. ವಿದ್ಯಾಲಕ್ಷ್ಮೀ ಅವರು ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ 598 ಅಂಕಗಳ ಗಳಿಸುವ ಮೂಲಕ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದಾಳೆ.

ನಗರ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಇಲ್ಲಿನ ಬೈರೇದೇವರಕೊಪ್ಪದ ಚೌಗುಲ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದಾಳೆ. ಪಿಯುಸಿಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ ವಿಷಯವನ್ನು ಆಯ್ಕೆ ಮಾಡಿಕೊಂಡಿದ್ದರು. ಇಂಗ್ಲೀಷ್ ಮಾಧ್ಯಮದಲ್ಲಿ ಪರೀಕ್ಷೆ ಬರೆದಿದ್ದರು. 600 ಅಂಕಗಳಿಗೆ 598 ಪಡೆಯುವ ಮೂಲಕ ರಾಜ್ಯಕ್ಕೆ ಮೊದಲ ರ್ಯಾಂಕ್ ತಮ್ಮದಾಗಿಸಿಕೊಂಡಿದ್ದಾರೆ.

ವಿದ್ಯಾಲಕ್ಷ್ಮಿ ಪ್ರಾಥಮಿಕ ಹಂತದಿಂದಲೂ ಓದಿನಲ್ಲಿ ಮುಂದೆ ಇರುವಂತಹ ವಿದ್ಯಾರ್ಥಿನಿ. ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಶೇಕಡಾ 97 ರಷ್ಟು ಅಂಕ ಪಡೆದಿದ್ದಳು. ತಂದೆ ಎಸ್. ಅಖಿಲೇಶ್ವರನ್ ಹಿರಿಯ ಸೆಕ್ಷನ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೂಲತಹ ತಮಿಳುನಾಡು ರಾಜ್ಯದವರಾದ ಇವರು 2002 ರಿಂದ ಹುಬ್ಬಳ್ಳಿಯಲ್ಲಿ ನೆಲೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!