October 18, 2026
Sunday, October 18, 2026
spot_img

ವಿಯೆಟ್ನಾಂ ಬೋಟ್ ದುರಂತ: 15 ಭಾರತೀಯರ ದುರ್ಮ*ರಣಕ್ಕೆ ಪ್ರಧಾನಿ ಮೋದಿ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಯೆಟ್ನಾಂನ ಫೂ ಕ್ವೋಕ್ ದ್ವೀಪದ ಸಮೀಪ ಸಂಭವಿಸಿದ ಬೋಟ್ ದುರಂತದಲ್ಲಿ 15 ಭಾರತೀಯ ಪ್ರವಾಸಿಗರು ಮೃತಪಟ್ಟಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಗಾಯಾಳುಗಳ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿರುವ ಅವರು, ಸಂತ್ರಸ್ತ ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

36 ಮಂದಿಯಿದ್ದ ಬೋಟ್ ಪಲ್ಟಿ

ಹಾನ್ ಮೇ ರುತ್ ದ್ವೀಪದಿಂದ ಅನ್ ಥೋಯ್ ಬಂದರಿಗೆ ತೆರಳುತ್ತಿದ್ದ ಸ್ಪೀಡ್ ಬೋಟ್ ಕರಾವಳಿಯಿಂದ ಅಲ್ಪ ದೂರದಲ್ಲೇ ಪಲ್ಟಿಯಾಗಿದೆ. ಬೋಟ್‌ನಲ್ಲಿ 32 ಭಾರತೀಯ ಪ್ರವಾಸಿಗರು ಹಾಗೂ ನಾಲ್ವರು ಸಿಬ್ಬಂದಿ ಸೇರಿ ಒಟ್ಟು 36 ಮಂದಿ ಪ್ರಯಾಣಿಸುತ್ತಿದ್ದರು. ರಕ್ಷಣಾ ಸಿಬ್ಬಂದಿ 21 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದು, 15 ಭಾರತೀಯರು ಮೃತಪಟ್ಟಿದ್ದಾರೆ.

ಇದನ್ನೂ ಓದಿ:

ರಾಯಭಾರ ಕಚೇರಿಗಳಿಂದ ತುರ್ತು ನೆರವು

ಘಟನೆ ಬಳಿಕ ಭಾರತೀಯ ರಾಯಭಾರ ಕಚೇರಿ ಹಾಗೂ ಹೋ ಚಿ ಮಿನ್ ಸಿಟಿಯ ಕಾನ್ಸುಲೇಟ್ ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿವೆ. ಸಂತ್ರಸ್ತರ ಕುಟುಂಬಗಳಿಗೆ ನೆರವು ಒದಗಿಸಲು ತುರ್ತು ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿ ಸಹಾಯವಾಣಿಯನ್ನೂ ಆರಂಭಿಸಲಾಗಿದೆ.

ರಾಜನಾಥ್ ಸಿಂಗ್ ಕೂಡ ಸಂತಾಪ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ದುರಂತಕ್ಕೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳೊಂದಿಗೆ ಭಾರತ ಸರ್ಕಾರ ಸದಾ ನಿಲ್ಲಲಿದೆ ಎಂದು ಹೇಳಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದ್ದು, ಘಟನೆಯ ಸಂಪೂರ್ಣ ಮಾಹಿತಿ ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ.

Must Read