ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರಶ್ಮಿಕಾ ಮಂದಣ್ಣ ‘ಪುಷ್ಪ 2’ ಸಿನಿಮಾದ ಸಕ್ಸಸ್ ಬೆನ್ನಲ್ಲೇ ಗುಡ್ ನ್ಯೂಸ್ ಕೊಟ್ಟಿದ್ದು, ಹೊಸ ಸಿನಿಮಾ ಘೋಷಣೆಯಾಗಿದೆ.
‘ಪುಷ್ಪ 2’ ಬಳಿಕ ರಶ್ಮಿಕಾ ಮಂದಣ್ಣ ನಟನೆಯ ಮುಂದಿನ ಸಿನಿಮಾ ಅಪ್‌ಡೇಟ್‌ವೊಂದು ಸಿಕ್ಕಿದೆ. ರಶ್ಮಿಕಾ ನಟನೆಯ ‘ದಿ ಗರ್ಲ್‌ಫ್ರೆಂಡ್’ ಸಿನಿಮಾದ ಟೀಸರ್ ರಿಲೀಸ್ ಅನ್ನು ವಿಜಯ್ ದೇವರಕೊಂಡ ಬಿಡುಗಡೆ ಮಾಡಲಿದ್ದಾರೆ. ಡಿ.9ರಂದು ಬೆಳಗ್ಗೆ 11:07ಕ್ಕೆ ಟೀಸರ್ ಅನ್ನು ರಿವೀಲ್ ಮಾಡಲಿದ್ದಾರೆ.
ನಿರ್ಮಾಪಕ ಅಲ್ಲು ಅರವಿಂದ್ ಅವರು ‘ದಿ ಗರ್ಲ್‌ಫ್ರೆಂಡ್’ ಚಿತ್ರವನ್ನು ಬಹುಭಾಷೆಗಳಲ್ಲಿ ನಿರ್ಮಾಣ ಮಾಡಲಿದ್ದಾರೆ. ವಿಶೇಷ ಅಂದರೆ ಈ ಚಿತ್ರದಲ್ಲಿ ಕನ್ನಡದ ನಟ ದೀಕ್ಷಿತ್ ಶೆಟ್ಟಿ ಪವರ್‌ಫುಲ್ ರೋಲ್‌ನಲ್ಲಿ ನಟಿಸಿದ್ದಾರೆ. ಈ ಸಿನಿಮಾ ಮೇಲೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ..