Monday, July 4, 2022

Latest Posts

ಲೈಗರ್ ʼಹಂಟ್‌ʼ ಟೀಸರ್ ಬಿಡುಗಡೆ;‌ ವಿಜಯ್‌ ದೇವರಕೊಂಡ ಲುಕ್‌ಗೆ ಫ್ಯಾನ್ಸ್‌ ಫಿದಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ತೆಲುಗು ಚಿತ್ರರಂಗದ ಸ್ಟಾರ್‌ ನಟ ವಿಜಯ್ ದೇವರಕೊಂಡ ಅಭಿನಯದ ಬಹುನಿರೀಕ್ಷಿತ ಪ್ಯಾನ್‌ ಇಂಡಿಯಾ ಚಿತ್ರ ʼಲೈಗರ್‌ʼ ಥೀಮ್‌ ಟೀಸರ್ ರಿಲೀಸ್‌ ಆಗಿದೆ.
ವಿಜಯ್‌ ದೇವರಕೊಂಡ ಜನ್ಮದಿನದ ಪ್ರಯುಕ್ತ ಚಿತ್ರತಂಡವು ಲಿರಿಕಲ್‌ ಥೀಮ್‌ ಮ್ಯೂಸಿಕ್ ಬಿಡುಗಡೆ ಮಾಡಿದೆ. ಲೈಗರ್‌ ʼಹಂಟ್‌ ಥೀಮ್‌ʼ ಎಂಬ ಹೆಸರಿನಲ್ಲಿ ಬಿಡುಗಡೆಯಾಗಿರುವ ಟೀಸರ್‌ ನಲ್ಲಿ ವಿಜಯ್‌ ರ ಬಾಕ್ಸರ್‌ ಲುಕ್‌ ರಿವೀಲ್‌ ಆಗಿದೆ. ದೇಹವನ್ನು ಹುರಿಗಟ್ಟಿಸಿ ಆಂಗ್ರಿಯಂಗ್‌ ಮ್ಯಾನ್‌ ರೂಪದಲ್ಲಿ ಕಾಣಿಸಿಕೊಂಡಿರುವ ವಿಜಯ್‌ ಲುಕ್‌, ತೀಕ್ಷ್ಣ ನೋಟ, ಹೋರಾಟದ ಚಿತ್ರಣಕ್ಕೆ ಫ್ಯಾನ್ಸ್‌ ಫಿದಾ ಆಗಿದ್ದಾರೆ. ಥೀಮ್‌ ಪೊಸ್ಟರ್ ಬಿಡುಗಡೆಯಾಗುತ್ತಿದ್ದಂತೆ ಯೂಟ್ಯೂಬ್‌ ನಲ್ಲಿ ಲಕ್ಷಾಂತರ ಹಿಟ್ಸ್‌ ಪಡೆದುಕೊಂಡಿದೆ.
ಚಿತ್ರಕ್ಕೆ ಪುರಿ ಜಗನ್ನಾಥ್ ನಿರ್ದೇಶನವಿದೆ. ಚಿತ್ರವು ಪ್ರಸ್ತುತ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ಚಿತ್ರದ ಮೂಲಕ‌ ಅಮೆರಿಕದ ಖ್ಯಾತ ಬಾಕ್ಸರ್ ಮೈಕ್ ಟೈಸನ್ ಭಾರತೀಯ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ದೇವರಕೊಂಡ ಎದುರು ನಾಯಕಿಯಾಗಿ ಬಾಲಿವುಡ್‌ ನಟಿ ಅನನ್ಯಾ ಪಾಂಡೆ ಕಾಣಿಸಿಕೊಳ್ಳಲಿದ್ದಾರೆ.
ಬಾಲಿವುಡ್‌ನ ಪ್ರಮುಖ ನಿರ್ಮಾಣ ಸಂಸ್ಥೆ ಧರ್ಮ ಪ್ರೊಡಕ್ಷನ್ಸ್ ಈ ಚಿತ್ರ ವನ್ನು ಜಂಟಿಯಾಗಿ ನಿರ್ಮಿಸುತ್ತಿದೆ. ಪುರಿ ಜಗನ್ನಾಥ್, ಚಾರ್ಮಿ ಕೌರ್, ಕರಣ್ ಜೋಹರ್ ಮತ್ತು ಅಪೂರ್ವ ಮೆಹ್ತಾ ಒಟ್ಟಾಗಿ ಚಿತ್ರಕ್ಕೆ ದೊಡ್ಡ ಮಟ್ಟದ ಬಂಡವಾಳ ಹೂಡಿದ್ದಾರೆ. ವಿಷ್ಣು ಶರ್ಮಾ ಛಾಯಾಗ್ರಹಣ, ಥಾಯ್ಲೆಂಡ್‌ನ ಕೇಚಾ ಸಾಹಸ ನಿರ್ದೇಶನ ಮಾಡಿದ್ದಾರೆ.
ಹಿಂದಿ, ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ತಯಾರಾಗುತ್ತಿರುವ ಪ್ಯಾನ್ ಇಂಡಿಯಾ ಚಿತ್ರ ಲೈಗರ್‌ 2022ರ ಆಗಸ್ಟ್ 25 ರಂದು ವಿಶ್ವದಾದ್ಯಂತ ಬಿಡುಗಡೆ ಕಾಣಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss