ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯ ಹಝಾರೆ ಟ್ರೋಫಿ ಟೂರ್ನಿಯ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿದ್ದು, 32 ತಂಡಗಳ ಪೈಕಿ ಎಂಟು ತಂಡಗಳು ಕ್ವಾರ್ಟರ್ ಫೈನಲ್ ಹಂತಕ್ಕೆ ಪ್ರವೇಶ ಪಡೆದಿವೆ. ಇದೀಗ ಟೂರ್ನಿ ಮತ್ತಷ್ಟು ರೋಚಕ ಹಂತಕ್ಕೆ ತಲುಪಿದ್ದು, ಮುಂದಿನ ಸುತ್ತಿನ ಪಂದ್ಯಗಳಿಗೆ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿದೆ.
ಕ್ವಾರ್ಟರ್ ಫೈನಲ್ ಪಂದ್ಯಗಳಿಗೆ ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನ ಆತಿಥ್ಯ ವಹಿಸಲಿದೆ. ಜನವರಿ 12ರಂದು ನಡೆಯಲಿರುವ ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಮುಂಬೈ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿದೆ. ಅದೇ ದಿನ ನಡೆಯುವ ಎರಡನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಉತ್ತರ ಪ್ರದೇಶ ಮತ್ತು ಸೌರಾಷ್ಟ್ರ ತಂಡಗಳು ಕಣಕ್ಕಿಳಿಯಲಿದ್ದು, ಈ ಪಂದ್ಯವೂ ಬೆಳಿಗ್ಗೆ 9 ಗಂಟೆಗೆ ಸೆಂಟರ್ ಆಫ್ ಎಕ್ಸಲೆನ್ಸ್‌ನ ಎರಡನೇ ಮೈದಾನದಲ್ಲಿ ನಡೆಯಲಿದೆ.
ಇದನ್ನೂ ಓದಿ: ಟೇಸ್ಟಿ ಕ್ಯಾರಮೆಲ್ ಆಲ್ಮಂಡ್ಸ್, ಮಕ್ಕಳು ಚಾಕೋಲೆಟ್ ಕೇಳಿದ್ರೆ ಇದನ್ನೇ ಕೊಡಿ
ಜನವರಿ 13ರಂದು ಮೂರನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಮತ್ತು ಮಧ್ಯಪ್ರದೇಶ ತಂಡಗಳು ಪರಸ್ಪರ ಎದುರಾಗಲಿವೆ. ಈ ಪಂದ್ಯವೂ ಬೆಳಿಗ್ಗೆ 9 ಗಂಟೆಗೆ ಮುಖ್ಯ ಮೈದಾನದಲ್ಲಿ ಆರಂಭವಾಗಲಿದೆ. ಅದೇ ದಿನ ನಡೆಯುವ ನಾಲ್ಕನೇ ಕ್ವಾರ್ಟರ್ ಫೈನಲ್‌ನಲ್ಲಿ ದೆಹಲಿ ಮತ್ತು ವಿದರ್ಭ ತಂಡಗಳು ಸೆಂಟರ್ ಆಫ್ ಎಕ್ಸಲೆನ್ಸ್‌ನ ಎರಡನೇ ಮೈದಾನದಲ್ಲಿ ಕಾದಾಡಲಿವೆ.
ಕ್ವಾರ್ಟರ್ ಫೈನಲ್ ಪಂದ್ಯಗಳ ಫಲಿತಾಂಶದಿಂದ ಸೆಮಿಫೈನಲ್ ಪ್ರವೇಶಿಸುವ ತಂಡಗಳು ನಿರ್ಧಾರವಾಗಲಿವೆ.

