ವಿಜಯ ರಾಘವೇಂದ್ರ ನಟನೆಯ ‘ಜೋಗ್ 101’ ಚಿತ್ರದ ಫಸ್ಟ್ ಲುಕ್ ಬಿಡುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ನಟ ವಿಜಯ ರಾಘವೇಂದ್ರ ಅಭಿನಯದ ‘ಜೋಗ್ 101’ ಚಿತ್ರದ ಫಸ್ಟ್‌ ಲುಕ್‌ ಇಂದು ಬಿಡುಗಡೆಯಾಗಿದೆ.ಚಿತ್ರದ ಫಸ್ಟ್ ಲುಕ್ ಕುತೂಹಲ ಮೂಡಿಸಿದ್ದು, ಸಿನಿ ಪ್ರೇಕ್ಷಕರ ಕಾತುರವನ್ನು ಹೆಚ್ಚಿಸಿದೆ.

ಸೆವೆನ್ ಸ್ಟಾರ್ ಪಿಕ್ಚರ್ಸ್ ಲಾಂಛನದಲ್ಲಿ ರಘು (ರಾಘವೇಂದ್ರ ) ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಕ್ರಿಯೇಟಿವ್ ಡೈರೆಕ್ಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ವಿಜಯ್ ಕನ್ನಡಿಗ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ನಾಯಕರಾಗಿ ನಟ ವಿಜಯ ರಾಘವೇಂದ್ರ ಮತ್ತು ನಾಯಕಿಯಾಗಿ ತೇಜಸ್ವಿನಿ ಶೇಖರ್ ಅವರು ನಟಿಸಿದ್ದಾರೆ.

ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರತಂಡದಿಂದ ಪ್ರಚಾರ ಕಾರ್ಯ ಆರಂಭಗೊಂಡಿದೆ. ಅದರ ಮೊದಲ ಹೆಜ್ಜೆಯಾಗಿ ಫಸ್ಟ್ ಲುಕ್ ಅನ್ನು ಇಂದು ಬಿಡುಗಡೆ ಮಾಡಲಾಗಿದೆ.

ಅವಿನಾಶ್ ಆರ್ ಬಾಸೂತ್ಕರ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ವಿ.ನಾಗೇಂದ್ರಪ್ರಸಾದ್, ಜಯಂತ್ ಕಾಯ್ಕಿಣಿ ಹಾಗೂ ಮನ್ವರ್ಷಿ ನವಲಗುಂದ ಬರೆದಿದ್ದಾರೆ. ರಘು ದೀಕ್ಷಿತ್ ಮತ್ತು ಸಂಚಿತ್ ಹೆಗಡೆ ಹಾಡಿದ್ದಾರೆ. ಸುನೀತ್ ಹಲಗೇರಿ ಛಾಯಾಗ್ರಹಣ, ಮೋಹನ್ ರಂಗಕಹಳೆ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಕಲೈ ಮಾಸ್ಟರ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಈ ಸಿನಿಮಾ ಮೂಲಕ ತೆರೆ ಮೇಲೆ ಗೋವಿಂದೇ ಗೌಡ, ಕಡ್ಡಿಪುಡಿ ಚಂದ್ರು, ರಾಜೇಶ್ ನಟರಂಗ, ತಿಲಕ್, ನಿರಂಜನ್ ದೇಶಪಾಂಡೆ, ಶಶಿಧರ್, ಪ್ರಸನ್ನ, ಸುಂದರಶ್ರೀ ಮತ್ತು ಹರ್ಷಿತಾ ಗೌಡ ಜೋಗ್ ಅವರು ಕಾಣಿಸಿಕೊಳ್ಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here