ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯ್ ರಾಘವೇಂದ್ರ ಹಾಗೂ ಸೋನು ಗೌಡ ನಟನೆಯ ಮರೀಚಿ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಪೊಲೀಸ್ ಖದರ್‌ನಲ್ಲಿ ನಟ ರಾಘವೇಂದ್ರ ಕಾಣಿಸಿಕೊಂಡಿದ್ದಾರೆ.
ಸಿದ್ಧ್ರುವ್ ನಿರ್ದೇಶನದ ಮೊದಲ ಸಿನಿಮಾ ಇದಾಗಿದ್ದು, ಚಿತ್ರಕ್ಕೆ ಕಥೆ, ಚಿತ್ರಕಥೆ ಕೂಡ ಇವರೇ ಬರೆದಿದ್ದಾರೆ .
ನಟ ವಿಜಯ ರಾಘವೇಂದ್ರ ಅವರಿಗೆ ಜೋಡಿಯಾಗಿ ನಟಿ ಸೋನು ಗೌಡ ನಟಿಸುತ್ತಿದ್ದು. ಅಭಿ ದಾಸ್, ಸ್ಪಂದನಾ ಸೋಮಣ್ಣ, ಆರ್ಯನ್, ಶ್ರುತಿ ಪಾಟೀಲ್, ಗೋಪಾಲ್ ಕೃಷ್ಣ ದೇಶಪಾಂಡೆ, ಅರುಣ ಬಾಲರಾಜ್ ಚಿತ್ರದ ತಾರಾಬಳಗದಲ್ಲಿದ್ದಾರೆ.
ಮನೋಹರ್ ಜೋಶಿ ಛಾಯಾಗ್ರಹಣ, ಜ್ಯೂಡ ಸ್ಯಾಂಡಿ ಸಂಗೀತ ನಿರ್ದೇಶನ ಚಿತ್ರಕ್ಕಿರಲಿದೆ. ಎಸ್ ಎಸ್ ರೆಕ್ ಬ್ಯಾನರ್ ನಡಿ ನಿರ್ದೇಶಕ ಸಿದ್ಧ್ರುವ್ ಹಾಗೂ ಸಂತೋಷ್ ಮಾಯಪ್ಪ ಚಿತ್ರವನ್ನು ನಿರ್ಮಿಸಿದ್ದಾರೆ. ಶೂಟಿಂಗ್ ಮುಗಿಸಿರುವ ಚಿತ್ರತಂಡ ಶೀಘ್ರದಲ್ಲೇ ಸಿನಿಮಾವನ್ನು ಬಿಡುಗಡೆ ಮಾಡಲು ಸಜ್ಜಾಗಿದೆ.