ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಇಂದು ನಟ ವಿಜಯ ರಾಘವೇಂದ್ರ ಮತ್ತು ಸ್ಪಂದನಾ ಅವರ 16ನೇ ವಿವಾಹ ವಾರ್ಷಿಕೋತ್ಸವ ಆದರೆ, ವಿಧಿಯಾಟ ಈ ಬಾರಿ ಬೇರೆಯೇ ಆಗಿದೆ. ಸ್ಪಂದನಾ ಹೃದಯಾಘಾತದಿಂದ ನಿಧನರಾಗಿ, ವಿಜಯ್ ಅವರ ಎದೆಯಲ್ಲಿ ಆರದ ಗಾಯ ಮಾಡಿ ಹೋಗಿದ್ದಾರೆ. ಅಗಲಿದ ಪತ್ನಿಗೆ ವಿಜಯ ರಾಘವೇಂದ್ರ ಭಾವುಕ ಸಾಲುಗಳ ಮೂಲಕ ವಿಶ್ ಮಾಡಿದ್ದಾರೆ.
ಭಾವುಕ ಸಾಲುಗಳನ್ನು ಬರೆದು, ಅದಕ್ಕೆ ವಿಡಿಯೋ ಸ್ಪರ್ಶ ಕೂಡ ನೀಡಿರುವ ವಿಜಯ ರಾಘವೇಂದ್ರ “ಚಿನ್ನ, ಇಣುಕು ನೋಟ ಬೀರಿ ಹೋದೆ ಬದುಕಿನ ಅಂಗಳದಲಿ.. ಎಲ್ಲೆ ಮೀರಿ ಒಲವ ನೀಡಿದೆ ಎದೆಯ ಅಂತರಾಳದಲಿ.. ಬದುಕನ್ನು ಕಟ್ಟಿ ಸರ್ವಸ್ವವಾದೆ.. ಉಸಿರಲ್ಲಿ ಬೆರೆತು ಜೀವಂತವಾದೆ.. ಮುದ್ದಾದ ನಗುವಿನಲ್ಲಿದ್ದ ಶಕ್ತಿ ಪರ್ವತದಷ್ಟು.. ಮರೆಯದೆ ತೊರೆಯದೆ ಎದೆಗೊತ್ತಿ ಪ್ರೀತಿಸುವೆ..” ಎಂದು ಬರೆದುಕೊಂಡಿದ್ದಾರೆ.