March 12, 2026
Thursday, March 12, 2026
spot_img

ವೈರಲ್ ಆಯ್ತು ವಿಜಯ್–ರಶ್ಮಿಕಾ ವೆಡ್ಡಿಂಗ್ ಕಾರ್ಡ್! ಮದುವೆ ಯಾವಾಗ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಚಿತ್ರರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಅವರ ವಿವಾಹವಾಗುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಫೆಬ್ರವರಿ 26ರಂದು ಇವರ ಮದುವೆ ನಡೆಯಲಿದೆ ಎಂಬ ಮಾಹಿತಿಯೊಂದಿಗಿನ ಆಮಂತ್ರಣ ಪತ್ರದ ಫೋಟೋ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಮಂತ್ರಣ ಪತ್ರದಲ್ಲಿ ಇವರಿಬ್ಬರ ಹೆಸರಿನ ಜೊತೆಗೆ ಮದುವೆ ದಿನಾಂಕ ಉಲ್ಲೇಖಿಸಲಾಗಿದೆ. ಇದರಿಂದ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಾಗಿದೆ. ಇನ್ನೂ ಮಾರ್ಚ್ 4ರಂದು ಹೈದರಾಬಾದ್‌ನ ತಾಜ್ ಕೃಷ್ಣಾ ಹೋಟೆಲ್‌ನಲ್ಲಿ ವಿಶೇಷ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ ಎಂಬ ಮಾಹಿತಿಯೂ ಹರಿದಾಡುತ್ತಿದೆ.

ಇದನ್ನೂ ಓದಿ:

ಕಳೆದ ಕೆಲವು ವರ್ಷಗಳಿಂದ ಇವರಿಬ್ಬರ ಸ್ನೇಹ ಹಾಗೂ ಪ್ರೀತಿಯ ಬಗ್ಗೆ ಸಾಕಷ್ಟು ಸುದ್ದಿಗಳು ಪ್ರಕಟವಾಗಿದ್ದವು. ನಿಶ್ಚಿತಾರ್ಥದ ಬಗ್ಗೆ ಸಹ ವದಂತಿಗಳು ಕೇಳಿಬಂದಿದ್ದರೂ, ಇದುವರೆಗೆ ಅವರಿಂದ ಯಾವುದೇ ಅಧಿಕೃತ ಪ್ರಕಟಣೆ ಬಂದಿರಲಿಲ್ಲ. ಈಗ ವೈರಲ್ ಆಗಿರುವ ಮದುವೆ ಕಾರ್ಡ್ ನಿಜವೇ ಅಥವಾ ಅಭಿಮಾನಿಗಳ ಸೃಷ್ಟಿಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.

ಈ ಕುರಿತು ನಟ-ನಟಿಯರ ತಂಡದಿಂದ ಅಧಿಕೃತ ಮಾಹಿತಿ ಹೊರಬಂದ ನಂತರವೇ ಸಂಪೂರ್ಣ ಸತ್ಯತೆ ತಿಳಿಯಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !