ಹೊಸದಿಗಂತ ಬೀದರ್:
ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ವಿಜಯಕುಮಾರ್ ಎಸ್. ಪಾಟೀಲ್ ಗಾದಗಿ ನೇಮಕಗೊಂಡಿದ್ದಾರೆ. ಜಿಲ್ಲೆಯಲ್ಲಿ ತಮ್ಮದೇ ಆದ ಯುವ ಪಡೆಯ ನೆಟ್ ವರ್ಕ್ ಹೊಂದಿರುವ ಪಾಟೀಲ್ ಅವರು, ಬಿಜೆಪಿಯ ವಿವಿಧ ಹುದ್ದೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದು, ಇದೀಗ ಜಿಲ್ಲಾ ಅಧ್ಯಕ್ಷ ಸೋಮನಾಥ ಪಾಟೀಲ್ ಅವರ ಹೊಸ ತಂಡದಲ್ಲೂ ಸ್ಥಾನ ಪಡೆದಿದ್ದಾರೆ.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ಬೀದರ್ ಮಂಡಲ ಅಧ್ಯಕ್ಷ, ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.
ವಿವಿಧ ಸಂಘ- ಸಂಸ್ಥೆ, ಸಾಮಾಜಿಕ ಚಟುವಟಿಕೆಗಳಲ್ಲೂ ಸಕ್ರಿಯರಾಗಿದ್ದಾರೆ. ಮೂರು ಅವಧಿಗೆ ಬೀದರ್ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಜಿ.ಎನ್. ಮಲ್ಟಿ ಸೂಪರ್ ಸ್ಪೆಷಾಲಿಟಿ ಸಹಕಾರ ಆಸ್ಪತ್ರೆಯ ನಿರ್ದೇಶಕರಾಗಿದ್ದಾರೆ.
ತಮ್ಮನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕ ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿರುವ ವಿಜಯಕುಮಾರ್ ಪಾಟೀಲ್, ಇದಕ್ಕಾಗಿ ಪಕ್ಷದ ಜಿಲ್ಲಾ ಅಧ್ಯಕ್ಷರು, ಮಾಜಿ ಸಂಸದರು, ಜಿಲ್ಲೆಯ ಪಕ್ಷದ ಶಾಸಕರು ಹಾಗೂ ಮಾಜಿ ಶಾಸಕರಿಗೆ ಕೃತಜ್ಞತೆ ತಿಳಿಸಿದ್ದಾರೆ.
ಪಕ್ಷ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವೆ. ಪಕ್ಷದ ಸಂಘಟನೆ ಬಲಪಡಿಸಲು ಶಕ್ತಿಮೀರಿ ಪ್ರಯತ್ನಿಸುವೆ ಎಂದು ಹೇಳಿದ್ದಾರೆ.