ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಇಂದು ತಾತ್ಕಾಲಿಕವಾಗಿ ಬಿಡುಗಡೆಯಾಗಲಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರನ್ನು ಬಳ್ಳಾರಿ ಜೈಲಿನಲ್ಲಿ ಭೇಟಿ ಮಾಡಿದ್ದು, ಆರು ವಾರಗಳ ಮಧ್ಯಂತರ ಜಾಮೀನು ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ಬೇಲ್ ಸಿಕ್ಕ ಬೆನ್ನಲ್ಲೇ ಜೈಲಿಗೆ ಆಗಮಿಸಿದ ಪತ್ನಿಯನ್ನು ನೋಡಲು ಹೈ ಸೆಕ್ಯೂರಿಟಿ ಸೆಲ್‌ನಿಂದ ತೀವ್ರ ಬೆನ್ನು ನೋವಿನಿಂದಲೇ, ದರ್ಶನ್ ಆಗಮಿಸಿದ್ದಾರೆ. ಜೈಲಿನ ಕೊಠಡಿಯಲ್ಲಿ ಕೆಲ ಕಾಲ ಮುಂದಿನ ಕಾನೂನು ಪ್ರಕ್ರಿಯೆ ಕುರಿತು ಪತ್ನಿ ಜೊತೆ ದರ್ಶನ್ ಚರ್ಚಿಸಿದ್ದಾರೆ ಎನ್ನಲಾಗಿದೆ.