Wednesday, June 29, 2022

Latest Posts

ವಿಜಯನಗರ ಪ್ರವಾಸ ಭೇಟಿ ಯಶಸ್ವಿ: ಸಂತಸದೊಂದಿಗೆ ಮರಳಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆಮಾಸ್ಕ್ ಧರಿಸಿಸಾಮಾಜಿಕ ಅಂತರ ಕಾಯ್ದುಕೊಳ್ಳಿಕೈಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿನೀವೂ ಸುರಕ್ಷಿತರಾಗಿರಿನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ ವಿಜಯನಗರ:

ಲಕ್ಷಾಂತರ ರೈತರ ಜೀವನಾಡಿ ತುಂಗಾಭದ್ರಾ ಜಲಾಶಯ, ವಿಶ್ವ ಪ್ರಸಿದ್ಧ ಹಂಪಿಯ ವಿಶ್ವಪಾರಂಪರಿಕ ಸ್ಥಳಗಳ ವೀಕ್ಷಣೆಗೆ ಮೂರು ದಿನಗಳ ಕಾಲ ಯಶಸ್ವಿಯಾಗಿ ವಿಜಯನಗರ ಪ್ರವಾಸ ಕೈಗೊಂಡು ಮರಳುತ್ತಿರುವ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಎಂ.ವೆಂಕಯ್ಯನಾಯ್ಡು ಅವರನ್ನು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಎಸ್ಪಿ ಸೈದುಲು ಅಡಾವತ್,ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಎಎಸ್ಪಿ ಬಿ.ಎನ್.ಲಾವಣ್ಯ,ಸಹಾಯಕ ಆಯುಕ್ತ ಸಿದ್ಧರಾಮೇಶ್ವರ ಮತ್ತಿತರರು ಇದ್ದರು.

ತುಂಗಾಭದ್ರಾ ಜಲಾಶಯ, ಹಂಪಿಯ ವಿಶ್ವಪಾರಂಪರಿಕ ಸ್ಮಾರಕಗಳನ್ನು ವೀಕ್ಷಿಸಿ ಅತ್ಯಂತ ಸಂತಸದೊಂದಿಗೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಹಾಗೂ ಅವರ ಧರ್ಮಪತ್ನಿ ಎಂ.ಉಷಾ ಹಾಗೂ ಅವರ ಕುಟುಂಬ ಮತ್ತು ಉಪರಾಷ್ಟ್ರಪತಿ ಕಚೇರಿಯ ಸಿಬ್ಬಂದಿಯೊಂದಿಗೆ ಮೂರು ವಾಯು ಸೇನೆಯ ವಿಶೇಷ ಹೆಲಿಕ್ಯಾಪ್ಟರ್ ಗಳಲ್ಲಿ ಹೊಸಪೇಟೆಯ ಮುನ್ಸಿಪಲ್ ಮೈದಾನದ ತಾತ್ಕಾಲಿಕ ಹೆಲಿಪ್ಯಾಡ್ ಮೂಲಕ ತೆರಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss