Tuesday, August 16, 2022

Latest Posts

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣ: ಡಿಸಿಎಂ ಗೋವಿಂದ ಕಾರಜೋಳ

ಹೊಸ ದಿಗಂತ ವರದಿ, ವಿಜಯಪುರ:

ಇಲ್ಲಿನ ಬುರಣಾಪುರ ಬಳಿ ನಿರ್ಮಿಸುತ್ತಿರುವ ವಿಮಾನ ನಿರ್ಮಾಣ ಕಾಮಗಾರಿಯು ಉತ್ತಮ ಗುಣಮಟ್ಟದೊಂದಿಗೆ ವೇಗವಾಗಿ ನಡೆಯುತ್ತಿದ್ದು, ನಿಗಿದಿತ ಅವಧಿಗಿಂತ ಮುಂಚಿತವಾಗಿ ಪೂರ್ಣಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ನಗರ ಹೊರ ವಲಯ ಬುರಣಾಪುರ ಬಳಿ ನಿರ್ಮಿಸುತ್ತಿರವ ವಿಮಾನ ನಿಲ್ದಾಣ ಕಾಮಗಾರಿಯನ್ನು ಸೋಮವಾರ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
95 ಕೋಟಿ ರೂ.ವೆಚ್ಚದಲ್ಲಿ ಮೊದಲ ಹಂತದ ಕಾಮಗಾರಿಯು ತ್ವರಿತವಾಗಿ ನಡೆಯುತ್ತಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ನಡೆಯುತ್ತಿರುವುದು ತೃಪ್ತಿಕರ ಸಂಗತಿಯಾಗಿದೆ. 2 ನೇ
ಹಂತದ‌ ಕಾಮಗಾರಿಯು 125 ಕೋಟಿ ರೂ. ವೆಚ್ಚದಲ್ಲಿ ನಡೆಯಲಿದೆ ಎಂದರು.
ಅನಂತರ ಡೂಪ್ಲೆಕ್ಸ್ ಕೋರ್ಟ್ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ, ಈ‌ ಕಾಮಗಾರಿಯು ಪೂರ್ಣವಾಗಿ ಮುಗಿದಿದ್ದು, ಕಂಪ್ಯೂಟರ್ ಜೋಡಣೆ, ಇಂಟರ್ ನೆಟ್ ಸಂಪರ್ಕ ಕಾಮಗಾರಿಯು ನಡೆಯುತ್ತಿದೆ. ಈ ಕಾಮಗಾರಿಯ ಗುಣಮಟ್ಟ‌ ಹಾಗೂ ಕಟ್ಟಡ ವಿನ್ಯಾಸ ಕುರಿತು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss