ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯಪುರದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಹಠಾತ್ ಏರುಪೇರು ಕಾಣಿಸಿಕೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಸದ ಜಿಗಜಿಣಗಿ ಮಿದುಳಿನ ರಕ್ತಸ್ರಾವಕ್ಕೆ ತುತ್ತಾಗಿದ್ದು, ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದೊಂದು ವಾರದಿಂದ ಸಂಸದರು ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದಾರೆಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.