ದಿಗಂತ ವರದಿ ವಿಜಯಪುರ:
ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು 17 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಪಾಲಿಕೆಯ 35 ವಾರ್ಡ್ ಗಳ ಪೈಕಿ ಕಾಂಗ್ರೆಸ್ 10, ಪಕ್ಷೇತರ 5, ಎಐಎಂಐಎಂ 2, ಜೆಡಿಎಸ್ 1 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಿಜೆಪಿಯ ಹೆಚ್ಚು ಅಭ್ಯರ್ಥಿಗಳು ವಿಜೇತರಾಗಿದ್ದಾರೆ.