ಹೊಸದಿಗಂತ ವರದಿ ವಿಜಯಪುರ:
ನಗರದ ದರಬಾರ ಶಾಲೆಯಲ್ಲಿ ಸ್ಥಾಪಿಸಲಾದ 219 ರ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ವಿಜಯ ಮಾಹಾಂತೇಶ ದಾನಮ್ಮನವರ ತಮ್ಮ ಪತ್ನಿ ಶ್ವೇತಾ ದಾನಮ್ಮನವರ ಸಮೇತ ತಮ್ಮ ಹಕ್ಕು ಚಲಾಯಿಸುವ ಮೂಲಕ ಮತದಾನ ಮಹತ್ವ ಸಾರಿದರು.
ಈ ಸಂದರ್ಭ ಅವರು ಮಾತನಾಡಿ, ಮತದಾನ ಒಂದು ಪವಿತ್ರವಾದ ಕರ್ತವ್ಯ, ಮತದಾನ ನಮ್ಮ ಹಕ್ಕು ಹಾಗೂ ಕರ್ತವ್ಯ ಕೂಡಾ. ನಮ್ಮ ಮತ ಪ್ರಗತಿಗೆ ಬರೆಯುವ ಮುನ್ನುಡಿ. ಮತದಾನ ನಮ್ಮೆಲ್ಲರ ಜವಾಬ್ದಾರಿಯೂ ಸಹ ಆಗಿದ್ದು, ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಬೇಕು ಎಂದು ಹೇಳಿದರು.