ವಿಜಯಪುರ: ಸಾಲಬಾಧೆ ತಾಳದೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಹೊಸದಿಗಂತ ವರದಿ ವಿಜಯಪುರ:
ಸಾಲಬಾಧೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಚಂದ್ರಶೇಖರ ಕೊಟ್ರಪ್ಪ ಕಡೂರ (51) ಆತ್ಮಹತ್ಯೆಗೆ ಶರಣಾಗಿರುವ ರೈತ. ಚಂದ್ರಶೇಖರ ಕಡೂರ ಈತ ಬ್ಯಾಂಕ್ ಸೇರಿದಂತೆ ವಿವಿಧೆಡೆ ಸುಮಾರು 8 ಲಕ್ಷ ಖಾಸಗಿ ಸಾಲ ಮಾಡಿಕೊಂಡಿದ್ದು, ಸಾಲಬಾಧೆ ತಾಳದೆ ತನ್ನದೇ ಹೊಲದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!