ವಿಜಯಪುರ: ಗೋಳಗುಮ್ಮಟದ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಹೊಸದಿಗಂತ ವರದಿ ವಿಜಯಪುರ:
ಐತಿಹಾಸಿಕ ಸ್ಮಾರಕ ಗೋಳಗುಮ್ಮಟ ವೀಕ್ಷಣೆಗೆ ತೆರಳಿದ್ದ ವ್ಯಕ್ತಿಯೊಬ್ಬ ಗೋಳಗುಮ್ಮಟ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಗೋಳಗುಮ್ಮಟ ಆವರಣದಲ್ಲಿ ಬುಧವಾರ ನಡೆದಿದೆ.
ಮೃತಪಟ್ಟವನನ್ನು ಸಲೀಂ ತಿಕೋಟ್ಕರ್ (55) ಎಂದು ಗುರುತಿಸಲಾಗಿದೆ. ಸಲೀಂ ತಿಕೋಟ್ಕರ್ ಈತ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!