ಹೊಸದಿಗಂತ ಡಿಜಿಟಲ್ ಡೆಸ್ಕ್:
348 ಕೋಟಿ ರೂ ವೆಚ್ಚದಲ್ಲಿ ತಲೆ ಎತ್ತಿರುವ ವಿಜಯಪುರ ವಿಮಾನ ನಿಲ್ದಾಣ 2025-26ನೇ ಸಾಲಿನಿಂದಲೇ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ವಿಧಾನಸಭೆಯಲ್ಲಿಂದು 2025-26ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಅವರು, 219 ಕೋಟಿ ರೂ ಅಂದಾಜು ವೆಚ್ಚದಲ್ಲಿ ರಾಯಚೂರು ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿತ್ತು. ಈಗಾಗಲೇ 53 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಮೈಸೂರು ವಿಮಾನ ನಿಲ್ದಾಣದ ರನ್ವೇ ವಿಸ್ತರಣೆಗೆ 319 ಕೋಟಿ ಅನುದಾನ ನೀಡಲಾಗಿದೆ ಎಂದರು.
ವಾಹನ ದಟ್ಟಣೆ ಇರುವ ರೈಲ್ವೇ ಲೆವೆಲ್ ಕ್ರಾಸಿಂಗ್ ಗೇಟ್ಗಳ ಬದಲಾಗಿ ರಸ್ತೆ ಮೇಲ್ಸೆತುವೆ-ಕೆಳಸೇತುವೆ ನಿರ್ಮಾಣ ಕಾಮಗಾರಿ ಅನುಷ್ಠಾನಕ್ಕೆ 50 ಕೋಟಿ ರೂ ಮೀಸಲಿಡಲಾಗಿದೆ ಎಂದು ತಿಳಿಸಿದರು.