ಗುಮ್ಮಟ ನಗರಿಯಲ್ಲಿ ಸಂಭ್ರಮದ 74ನೇ ಗಣರಾಜ್ಯೋತ್ಸವ: ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ

ಹೊಸದಿಗಂತ ವರದಿ ವಿಜಯಪುರ:

ಗುಮ್ಮಟ ನಗರದಲ್ಲಿ ಗುರುವಾರ 74 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ಧ್ವಜಾರೋಹಣ ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿದರು.

ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಸಂಸದ ರಮೇಶ ಜಿಗಜಿಣಗಿ, ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಬಿಜೆಪಿ ಮುಖಂಡ ಚಂದ್ರಶೇಖರ ಕವಟಗಿ, ಜಿಪಂ ಸಿಇಒ ರಾಹುಲ್ ಸಿಂಧೆ, ಎಸ್ಪಿ ಎಚ್.ಡಿ. ಆನಂದಕುಮಾರ ಸೇರಿದಂತೆ ಗಣ್ಯರು, ಅಧಿಕಾರಿಗಳು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!