ವಿಜಯಪುರ ಪಾಲಿಕೆ ಚುನಾವಣೆ; 33 ಬಿಜೆಪಿ ಅಭ್ಯರ್ಥಿಗಳ ಗೆಲುವು ಖಚಿತ: ಆರ್.ಎಸ್. ಪಾಟೀಲ

ಹೊಸ ದಿಗಂತ ವರದಿ,  ವಿಜಯಪುರ:

ಸ್ಥಳೀಯ ಮಹಾನಗರ ಪಾಲಿಕೆ ಚುನಾವಣೆಯ 35 ವಾರ್ಡ್’ಗಳ ಪೈಕಿ ಸ್ಪರ್ಧಿಸಿರುವ 33 ಬಿಜೆಪಿ ಅಭ್ಯರ್ಥಿಗಳು ಗೆಲವು ಸಾಧಿಸುವುದು ಖಚಿತ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2023ರ ವಿಧಾನ ಸಭೆ ಚುನಾವಣೆ ಮುಂದಿಟ್ಟುಕೊಂಡು ನಡೆಯುತ್ತಿರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅತ್ಯಂತ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದರು.

ಪಾಲಿಕೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ನಿಟ್ಟಿನಲ್ಲಿ ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ಎಲ್ಲರೂ ಸೇರಿ ಒಗ್ಗಟ್ಟಿನಿಂದ ಶ್ರಮಿಸಲಾಗುತ್ತಿದೆ. ಈಗಾಗಲೇ ಬಂಡಾಯವಾಗಿ ಸ್ಪರ್ಧಿಸಿದ ಮೂರ್ನಾಲ್ಕು ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ನಮ್ಮ ಅಭ್ಯರ್ಥಿಗಳ ಗೆಲುವಿನ ದಾರಿ ಸುಗಮವಾಗಲಿದೆ ಎಂದರು.

ಬಿಜೆಪಿ ಟಿಕೆಟ್ ನೀಡುವ ವೇಳೆ ಎಲ್ಲ ಸಮುದಾಯಗಳಿಗೆ ಆದ್ಯತೆ ನೀಡಲಾಗಿದ್ದು, ಒಮ್ಮತದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಎಲ್ಲ ಸ್ಥಾನಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.

ಬಿಜೆಪಿ ಮುಖಂಡರಾದ ಚಂದ್ರಶೇಖರ ಕವಟಗಿ, ಮಲ್ಲಿಕಾರ್ಜುನ ಜೋಗೂರ, ವಿಕ್ರಮ ಗಾಯಕವಾಡ, ಪಾಪುಸಿಂಗ್ ರಜಪೂತ, ವಿಜಯ ಜೋಶಿ, ಭರತ ಕೋಳಿ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!