Friday, June 2, 2023

Latest Posts

ವಿಜಯಪುರ- 15 – 18 ವರ್ಷದೊಳಗಿನವರಿಗೆ ಲಸಿಕೆ ನೀಡಲು ಚಾಲನೆ

ದಿಗಂತ ವರದಿ ವಿಜಯಪುರ:

ನಗರದ ಸರ್ಕಾರಿ ಕಾಲೇಜಿನಲ್ಲಿ 15 ವರ್ಷದಿಂದ 18 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೋಮವಾರ ಚಾಲನೆ ನೀಡಿದರು.

ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡ ಲಸಿಕಾಕರಣದಲ್ಲಿ ವಿದ್ಯಾರ್ಥಿಗಳು ಆಧಾರ್ ಕಾರ್ಡ್ ಹಾಗೂ ಕಾಲೇಜು ಐಡಿ ಕಾರ್ಡ್ ತೋರಿಸಿ ಲಸಿಕೆ ಪಡೆದರು.

ಜಿಲ್ಲೆಯಲ್ಲಿ ಒಟ್ಟು 1,23,438 ಮಕ್ಕಳಿಗೆ ಲಸಿಕೆ ನೀಡಲು ಗುರಿ ಹೊಂದಲಾಗಿದೆ. ಸದ್ಯ ಜಿಲ್ಲೆಯಲ್ಲಿ 85170‌ ಲಸಿಕೆ ಸಂಗ್ರಹಿಸಿಡಲಾಗಿದೆ. ಜಿಲ್ಲೆಯಲ್ಲಿ ಲಸಿಕೆ ನೀಡಲು 173 ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!