ದಿಗಂತ ವರದಿ ವಿಜಯಪುರ:
ಅವಳಿ ಜಿಲ್ಲೆ ವಿಜಯಪುರ- ಬಾಗಲಕೋಟೆ ದ್ವಿ ಸದಸ್ಯ ಸ್ಥಾನದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ನಗರದ ದರಬಾರ ಹೈಸ್ಕೂಲ್ ನಲ್ಲಿ ಬೆಳಗ್ಗೆ ಆರಂಭಗೊಡಿದೆ.
ಇಲ್ಲಿ ಇರಿಸಲಾಗಿದ್ದ ಮತಪೆಟ್ಟಿಗೆಯ ಭದ್ರತಾ ಕೊಠಡಿಯನ್ನು ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಪಿ.ಸುನೀಲಕುಮಾರ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಬೆಳಗ್ಗೆ 7.30 ಗಂಟೆಗೆ ತೆರೆಯಲಾಗಿದ್ದು, ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭಗೊಂಡಿದೆ.