August 28, 2026
Friday, August 28, 2026
spot_img

ವಿಜಯಪುರ ಪೊಲೀಸರ ಸರ್ಜಿಕಲ್ ಸ್ಟ್ರೈಕ್: ರೌಡಿಶೀಟರ್ ಮನೆಗಳ ಮೇಲೆ ದಿಢೀರ್ ದಾಳಿ

ಹೊಸದಿಗಂತ ವಿಜಯಪುರ:

ವಿಜಯಪುರ ಜಿಲ್ಲೆಯಲ್ಲಿ ರೌಡಿಶೀಟರ್ ಗಳನ್ನು ಬೆಂಡೆತ್ತಲು ಪೊಲೀಸ್ ಇಲಾಖೆ ಮುಂದಾಗಿದ್ದು, ಜಿಲ್ಲೆಯ 24 ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಮನೆಗಳ ಪರಿಶೀಲನೆಗೆ ಪೊಲೀಸರು ಮುಂದಾಗಿದ್ದಾರೆ.

ಜಿಲ್ಲೆಯ ಆಯಾ ಪೊಲೀಸ್ ಠಾಣಾಧಿಕಾರಿಗಳಿಂದ ರೌಡಿಶೀಟರ್ ಮನೆಗಳಲ್ಲಿ ಪರಿಶೀಲನೆ ಮುಂದಾಗಿದ್ದು, ಒಟ್ಟು 162 ರೌಡಿಶೀಟರ್ ಮನೆಗಳನ್ನು ಪೊಲೀಸರು ತಪಾಸಣೆ ನಡೆಸಿದರು.

ಮೂವರು ರೌಡಿಶೀಟರ್ ಮನೆಗಳಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿದ್ದು, ಬೈಕ್, ಕಾರಿನ ದಾಖಲೆ ಇಲ್ಲದೇ ಬಳಸುತ್ತಿದ್ದ 11 ರೌಡಿಶೀಟರ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಓರ್ವ ರೌಡಿಶೀಟರ್‌ನಿಂದ ಆಸ್ತಿ ಮುಟ್ಟುಗೊಲು ಮಾಡಿಕೊಳ್ಳಲಾಗಿದ್ದು, ಹೀಗೆ 161 ರೌಡಿಶೀಟರ್‌ಗಳ ಮನೆಗಳಲ್ಲಿ ಪೊಲೀಸರು ದಾಳಿ ನಡೆಸಿ ಕಾನೂನು ಪಾಲನೆ ಮಾಡುವಂತೆ ಎಚ್ಚರಿಕೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !