ವಿಜಯಪುರ: ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಹೊಸದಿಗಂತ ವರದಿ ವಿಜಯಪುರ:
ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವವೊಂದು ಪತ್ತೆಯಾಗಿರುವ ಘಟನೆ ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಪತ್ತೆಯಾಗಿದೆ.
ಮೃತಪಟ್ಟವನನ್ನು ಗುಮಾಸ್ತೆ ಕಾಲೋನಿ ನಿವಾಸಿ ಶಂಬುಲಿಂಗ ದುಂಡಪ್ಪ ರೇವಡಿಗಾರ ಎಂದು ಗುರುತಿಸಲಾಗಿದೆ.
ಶಂಬುಲಿಂಗ ರೇವಡಿಗಾರ ಈತನ ಶವ ಅನುಮಾನಾಸ್ಪದ ರೀತಿಯಲ್ಲಿ ಸಿಕ್ಕಿದ್ದು, ಇನ್ನು ಇದು ಕೊಲೆಯೋ ಅಥವಾ ಸಹಜ ಸಾವೋ ಎನ್ನುವುದು ತನಿಖೆ ಬಳಿಕ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!