spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿಜಯಪುರ| ಮೂವರು ಮಹಿಳೆಯರಿಂದ ದಲಿತ ಮಹಿಳೆ ಮೇಲೆ ದೌರ್ಜನ್ಯ

- Advertisement -Nitte

ದಿಗಂತ ವರದಿ ವಿಜಯಪುರ:

ದಲಿತ ಮಹಿಳೆಯ ಕೂದಲು ಹಿಡಿದು, ಮೂವರು ಮಹಿಳೆಯರು ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಗಣಿಹಾರ ಗ್ರಾಮದಲ್ಲಿ ನಡೆದಿದೆ.

ಮನೆ ಜಾಗದ ವಿಷಯಕ್ಕೆ ಸಂಬಂಧಿಸಿದಂತೆ, ಗ್ರಾಮದ ಶರಣಮ್ಮ ಬಂದಾಳ ಎಂಬ ಮಹಿಳೆಯ ಕೂದಲು ಹಿಡಿದು, ಸಾಜಾದ್ ಬಿ ಗೋಟ್ಯಾಳ ಸೇರಿ ಮೂವರು ಮನಬಂದಂತೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ದಲಿತ ಮಹಿಳೆ ಮೇಲಿನ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಜಿಲ್ಲೆಯಲ್ಲಿ ವೈರಲ್ ಆಗಿದೆ.

ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss