ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿಜಯಪುರ| ಸಿಎಂ ಆಗಿ ಯಡಿಯೂರಪ್ಪ ಅವರನ್ನೇ ಮುಂದುವರೆಸಿ: ಜಿಲ್ಲಾ ಮಠಾಧೀಶರ ಒಕ್ಕೂಟ ಆಗ್ರಹ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ವರದಿ ವಿಜಯಪುರ:

ಯಡಿಯೂರಪ್ಪ ಅವರ ನಂತರ ಬಿಜೆಪಿಯಲ್ಲಿ ಸಿಎಂ ಆಗಲು ಯಾರೂ ಯೋಗ್ಯರಿಲ್ಲ, ಒಂದು ವೇಳೆ ಯಡಿಯೂರಪ್ಪ ಅವರನ್ನು ಬದಲಾಯಿಸಿದರೆ ಮುಂದಿನ ದಿನಗಳಲ್ಲಿ 400 ಕ್ಕೂ ಹೆಚ್ಚು ಮಠಾಧೀಶರನ್ನು ಸೇರಿಸಿ ಶಕ್ತಿ ಪ್ರದರ್ಶನ ಮಾಡಬೇಕಾಗುತ್ತದೆ ಎಂದು ಜಿಲ್ಲಾ ಮಠಾಧೀಶರ ಒಕ್ಕೂಟ ಎಚ್ಚರಿಸಿದೆ.

ನಗರದಲ್ಲಿ ಗುರುವಾರ ವಿವಿಧ ಮಠಾಧೀಶರು ಜಂಟಿ ಪತ್ರಿಕಾಗೋಷ್ಠಿ ನಡೆಸಿ, ಯಡಿಯೂರಪ್ಪನವರು ಹೋರಾಟದ ಹಿನ್ನೆಲೆಯಿಂದ ಬಂದವರು. ಅವರೊಬ್ಬ ಪ್ರಬುದ್ಧ ರಾಜಕಾರಣಿ. ಜಂಗಮಪ್ರೇಮಿ ಹೀಗಾಗಿ ನಮ್ಮೆಲ್ಲರ ಅಭಿಪ್ರಾಯಕ್ಕೆ ಹೈಕಮಾಂಡ್ ಬೆಲೆ ನೀಡಿ ಯಡಿಯೂರಪ್ಪ ಅವರನ್ನು ಸಿಎಂ ಆಗಿ ಮುಂದುವರೆಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಅವರ ಪಾತ್ರ ದೊಡ್ಡದಿದೆ, ಅತಿ ಹೆಚ್ಚಿನ ಸಂಸದರನ್ನು ಆಯ್ಕೆ ಮಾಡುವಲ್ಲಿಯೂ ಅವರ ಶ್ರಮವಿದೆ ಇನ್ನೂ ಎರಡು ವರ್ಷ ಮುಂದುವರೆಸಬೇಕು. ಇಲ್ಲದಿದ್ದರೆ, 2013ರಲ್ಲಿ ಬಿಜೆಪಿಗೆ ಆದ ಗತಿಯೇ ಮುಂದೆ ಆಗಲಿದೆ. ಈಗಲಾದರು ಬಿಜೆಪಿ ಶಾಸಕರು, ಸಚಿವರು ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಲ್ಲಬೇಕು ಎಂದು ಒತ್ತಾಯಿಸಿದರು.

ಬಬಲೇಶ್ವರದ ಡಾ.ಮಹದೇವ ಶಿವಾಚಾರ್ಯ ಸ್ವಾಮೀಜಿ, ಯೋಗೇಶ್ವರಿ ಮಾತಾಜಿ, ಮನಗೂಳಿಯ ಸಂಗನಬಸವ ಸ್ವಾಮೀಜಿ ಸೇರಿದಂತೆ 15 ಕ್ಕೂ ಹೆಚ್ಚು ವಿವಿಧ ಮಠಾಧೀಶರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss