ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ದುರಂತ ಘಟನೆಗೆ ರಾಜ್ಯ ಸರ್ಕಾರವೇ ಸಂಪೂರ್ಣ ಹೊಣೆಯನ್ನು ಹೊರಬೇಕಾಗುತ್ತದೆ. ಸಿಎಂ, ಡಿಸಿಎಂ, ಸಚಿವರಿಗೆ ಪ್ರಚಾರದ ಹುಚ್ಚೇ ಜಾಸ್ತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮ್ಯಾಜಿಸ್ಟ್ರೇಟ್‌ನಿಂದ ಯಾವುದೇ ಕಾರಣಕ್ಕೂ ತನಿಖೆ ಸಾಧ್ಯವಿಲ್ಲ. ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಆಗಬೇಕು ಎಂದು ಆಗ್ರಹಿಸಿದರು.
ಪರಿಹಾರವನ್ನು ಬರೀ ಹತ್ತು ಲಕ್ಷ ಘೋಷಣೆ ಮಾಡಿದ್ದಾರೆ. ಕೇರಳದ ಆನೆ ತುಳಿತಕ್ಕೆ 25 ಲಕ್ಷ ಕೊಡ್ತೀರಾ. ಆದರೆ, ನಮ್ಮ ರಾಜ್ಯದಲ್ಲಿ ಸಾವನ್ನಪ್ಪಿದವರಿಗೆ 50 ಲಕ್ಷ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.