ಹೊಸ ದಿಗಂತ ದಿಗಂತ ಡಿಜಿಟಲ್ ಡೆಸ್ಕ್:
ವರುಣಾ ವಿಧಾನಸಭಾ ಕ್ಷೇತ್ರದಿಂದ, ಕಾಂಗ್ರೆಸ್ನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭ್ಯರ್ಥಿಯಾಗಿರುವುದರಲ್ಲಿ ವಿಶೇಷತೆ ಏನಿಲ್ಲ, ವರುಣಾಗೆ ವಿಜಯೇಂದ್ರ ಅವರು ಬಿಜೆಪಿ ಅಭ್ಯರ್ಥಿಯಾಗಿ ಬಂದರೆ ಅವರಿಗೆ ನಮ್ಮ ಬೆಂಬಲ ಇದೆ ಎಂದು ವರುಣಾ ಕ್ಷೇತ್ರದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿ ಸದಾನಂದ ಹೇಳಿದ್ದಾರೆ.
ಮೈಸೂರಿನ ಪತ್ರಿಕಾ ಭವನದಲ್ಲಿ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ವರುಣಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಆಗಿರುವ ಸಿದ್ದರಾಮಯ್ಯ ಆಯ್ಕೆ ವಿಚಾರದಲ್ಲಿ ಯಾವುದೇ ವಿಶೇಷತೆ ಇಲ್ಲ. ಆದರೆ ಕೆಲವೇ ದಿನಗಳಲ್ಲಿ ಬಿಜೆಪಿ ಪ್ರಬಲ ಅಭ್ಯರ್ಥಿಯನ್ನು ಘೋಷಣೆ ಮಾಡಲಿದ್ದು, ಸಿದ್ದರಾಮಯ್ಯ ಅವರನ್ನು ಸೋಲಿಸುವ ಪ್ರಬಲ ಅಭ್ಯರ್ಥಿಯನ್ನು ಪಕ್ಷದ ಹೈಕಮಾಂಡ್ ಕಣಕ್ಕೆ ಇಳಿಸಲಿದೆ ಎಂದರು.
ನಾನು ಜಿಲ್ಲಾ ಪಂಚಾಯತ್ ಸದಸ್ಯನಾಗಿ, ಸಹಕಾರ ಕ್ಷೇತ್ರದಲ್ಲಿ ಸಿಕ್ಕ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಿದ್ದೇನೆ. ಜನರ ಜೊತೆ ಪ್ರತಿ ನಿತ್ಯ ಒಡನಾಟ ಇಟ್ಟುಕೊಂಡಿದ್ದೇನೆ. ಹೈ ಕಮಾಂಡ್ ಟಿಕೆಟ್ ನೀಡಿದರೆ ನಾನು ಸಹ ಸ್ಪರ್ಧೆ ಮಾಡುತ್ತೇನೆ ಎಂದರು.