ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪದಗ್ರಹಣ ನಂತರ ನವೆಂಬರ್ 16 ರಂದು ಅರಮನೆ ಮೈದಾನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದೆ.
ನಿಗದಿಯಂತೆ ರಾಜ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಮಲ್ಲೇಶ್ವರಂ ನ ಬಿಜೆಪಿ ಕಚೇರಿಯಲ್ಲಿ ನಡೆಯಲಿದೆ.ನಳಿನ್ ಕುಮಾರ್ ಕಟೀಲ್ ಅವರು ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಪಕ್ಷದ ಧ್ವಜ ಹಸ್ತಾಂತರ ಮಾಡಲಿದ್ದಾರೆ.
ಇನ್ನು ಈ ಪದಗ್ರಹ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಇತರ ರಾಜ್ಯದ ಮುಖಂಡರು ಭಾಗವಹಿಸಲಿದ್ದಾರೆ.
ನವೆಂಬರ್ 16 ರಂದು ಅರಮನೆ ಮೈದಾನದಲ್ಲಿ ನಡೆಯಬೇಕಿದ್ದ ಬಿಜೆಪಿ ಕಾರ್ಯಕರ್ತರ ಬೃಹತ್ ಸಭೆ ಮುಂದೂಡಲಾಗಿದೆ. ನವೆಂಬರ್ ಅಂತ್ಯದವರೆಗೆ ಐದು ರಾಜ್ಯಗಳ ವಿಧಾನ ಸಭಾ ಚುನಾವಣೆ ನಡೆಯಲಿವೆ.ಹಾಗಾಗಿ ಕೇಂದ್ರ ನಾಯಕರು ಪ್ರಚಾರದಲ್ಲಿ ಇರುವ ಕಾರಣ.ನವೆಂಬರ್ 16 ರಂದು ಕಾರ್ಯಕ್ರಮ ನಡೆಸಿದರೆ ಕೇಂದ್ರ ನಾಯಕರು ಬರುವುದಿಲ್ಲ. ಹಾಗಾಗಿ ನವೆಂಬರ್ 23 ರ ನಂತರ ಕಾರ್ಯಕರ್ತರ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ.