ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆಗೆ ಭೇಟಿ ಕೊಟ್ಟ ವಿಜಯೇಂದ್ರಗೆ ಅದ್ದೂರಿ ಸ್ವಾಗತ 

ಹೊಸದಿಗಂತ ವರದಿ ಶಿವಮೊಗ್ಗ:

ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಇದೇ ಮೊದಲ‌ಬಾರಿಗೆ ಬಿ.ವೈ.ವಿಜಯೇಂದ್ರ ತವರು ಜಿಲ್ಲೆಗೆ ಇಂದು‌ ಆಗಮಿಸಿದ್ದು, ಅದ್ಧೂರಿ ಸ್ವಾಗತ ನೀಡಲಾಯಿತು.

ಹೊಳೆ ಬಸ್ ನಿಲ್ದಾಣ ಬಳಿಯ ಬೆಕ್ಕಿನ‌ಕಲ್ಮಠದ ಬಳಿ ಅವರನ್ನು ಸ್ವಾಗತಿಸಿದ ಬಳಿಕ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ಯೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು.

ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮತ್ತೂರು ಗ್ರಾಮದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣಾ ಪ್ರಾಂತ ಸಹ ಕಾರ್ಯವಾಹ ಪಟ್ಟಾಭಿರಾಮ ಅವರ ನಿವಾಸಕ್ಕೆ ಹಾಗೂ ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಂ.ಬಿ ಭಾನುಪ್ರಕಾಶ್ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು.

ಬೆಕ್ಕಿನ‌ಕಲ್ಮಠದಲ್ಲಿ‌ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ.ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಹಾಗೂ ಇತರೆ ಶ್ರೀಗಳಿಗೆ ಗೌರವ ಸಮರ್ಪಣೆ ಸಲ್ಲಿಸಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಉಪಸ್ಥಿತರಿದ್ದರು.

ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ‌ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದ ಬಳಿಕ ಬಿಜೆಪಿ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಸನ್ಮಾನ‌ ಸ್ವೀಕರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!