ವಿಜಯಪುರ: ಭಾರಿ ಮಳೆಗೆ ಕುಸಿದ ಮನೆ, ಅಪಾರ ಹಾನಿ

ಹೊಸದಿಗಂತ ವರದಿ ವಿಜಯಪುರ:
ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆಯೊಂದ ಕುಸಿತ ಕಂಡಿರುವ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಬಸವರಾಜ ಸಿಂದಗಿ ಎಂಬವರ, ಮನೆ ಮೇಲ್ಛಾವಣಿ ಕುಸಿದಿದ್ದು, ಈ ಸಂದರ್ಭದಲ್ಲಿ ಎಚ್ಚತ್ತುಕೊಂಡ ಕುಟುಂಬಸ್ಥರು ಮನೆಯಿಂದ ಆಚೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.
ಮೇಲ್ಛಾವಣಿ ಕುಸಿತದಿಂದ 3 ಲಕ್ಷಕ್ಕೂ ಅಧಿಕ ಹಾನಿಯಾಗಿದ್ದು, ಮನೆಯಲ್ಲಿದ್ದ ವಸ್ತುಗಳು ಜಖಂಗೊಂಡಿವೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!