ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದಳಪತಿ ವಿಜಯ್ ಅವರ ರಾಜಕೀಯ ಪ್ರವೇಶದ ಮಧ್ಯೆ ಅವರ ವೈಯಕ್ತಿಕ ಬದುಕು ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ.
ನಟಿ ತ್ರಿಷಾ ಕೃಷ್ಣನ್ ಜೊತೆ ವಿಜಯ್ ಸಾರ್ವಜನಿಕವಾಗಿ ಕಾಣಿಸಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳ ನಡುವೆ ಭಾರಿ ಚರ್ಚೆಗೆ ಕಾರಣವಾಗಿದೆ.
ಇತ್ತೀಚೆಗೆ ವಿಜಯ್ ಅವರ ಪತ್ನಿ ಸಂಗೀತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆಯೆಂಬ ಸುದ್ದಿ ಹೊರಬಂದಿತ್ತು. ಜೊತೆಗೆ ವಿಜಯ್ ಅವರಿಗೆ ನಟಿಯೊಬ್ಬರೊಂದಿಗೆ ಅನೈತಿಕ ಸಂಬಂಧವಿದೆ ಎಂದು ಸಂಗೀತಾ ಆರೋಪಿಸಿದ್ದಾರೆಯೆಂಬ ವರದಿಗಳೂ ಹರಿದಾಡುತ್ತಿದ್ದವು. ಇದೇ ಸಂದರ್ಭದಲ್ಲಿ ವಿಜಯ್ ಮತ್ತು ತ್ರಿಷಾ ಒಟ್ಟಿಗೆ ಕಾಣಿಸಿಕೊಂಡಿರುವ ವಿಡಿಯೋ ಹೊರಬಂದಿರುವುದು ಮತ್ತಷ್ಟು ಚರ್ಚೆಗೆ ದಾರಿ ಮಾಡಿಕೊಟ್ಟಿದೆ.
ಇದನ್ನೂ ಓದಿ:
ತಮಿಳುನಾಡಿನಲ್ಲಿ ಸಿನಿಮಾ ಕಲಾವಿದರು ರಾಜಕೀಯದಲ್ಲಿ ಯಶಸ್ಸು ಕಂಡಿರುವ ಅನೇಕ ಉದಾಹರಣೆಗಳಿವೆ. ಇದೇ ಹಾದಿಯಲ್ಲಿ ವಿಜಯ್ ‘ಟಿವಿಕೆ’ ಪಕ್ಷ ಸ್ಥಾಪಿಸಿ ರಾಜಕೀಯ ಪ್ರವೇಶ ಮಾಡಿದ್ದಾರೆ. ಮುಂಬರುವ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ರಾಜಕೀಯ ವಲಯದಲ್ಲೂ ಗಮನ ಸೆಳೆದಿದೆ.
ಈವರೆಗೆ ವಿಜಯ್ ಮತ್ತು ತ್ರಿಷಾ ಕೇವಲ ಸ್ನೇಹಿತರು ಎಂದು ಅಭಿಮಾನಿಗಳು ಹೇಳುತ್ತಿದ್ದರು. ಗಾಸಿಪ್‌ಗಳು ವಿಜಯ್ ಅವರ ರಾಜಕೀಯ ಭವಿಷ್ಯಕ್ಕೆ ಹಾನಿಯಾಗಬಾರದು ಎಂದು ಅಭಿಮಾನಿಗಳು ಬೆಂಬಲ ನೀಡುತ್ತಿದ್ದರು. ಆದರೆ ಇದೀಗ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವಿಭಿನ್ನ ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ.
ಕೆಲವರು ಇದನ್ನು ಟೀಕಿಸುತ್ತಿದ್ದರೆ, ಇನ್ನೂ ಕೆಲ ಅಭಿಮಾನಿಗಳು ವಿಜಯ್ ನಿರ್ಧಾರವನ್ನು ಸಮರ್ಥಿಸುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ನಡುವಿನ ಸಂಬಂಧವನ್ನು ಅವರು ಪರೋಕ್ಷವಾಗಿ ಬಹಿರಂಗಪಡಿಸಿದ್ದಾರೆ ಎಂಬ ಅಭಿಪ್ರಾಯವೂ ನೆಟ್ಟಿಗರಲ್ಲಿ ಕೇಳಿಬರುತ್ತಿದೆ.



