ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ವಿಜೇಂದರ್: ರಾಹುಲ್ ಜೊತೆ ಮೀಸೆ ತಿರುವಿದ ಬಾಕ್ಸರ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶಕ್ಕೆ ಕಾಲಿಟ್ಟಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಒಲಿಂಪಿಕ್ ಪದಕ ವಿಜೇತ ಬಾಕ್ಸರ್ ಮತ್ತು ಕಾಂಗ್ರೆಸ್ ನಾಯಕ ವಿಜೇಂದರ್ ಸಿಂಗ್ ಹೆಜ್ಜೆ ಹಾಕಿದರು.

ಈ ಕುರಿತಂತೆ ಕಾಂಗ್ರೆಸ್ ಟ್ವಿಟರ್ ನಲ್ಲಿ ಇಬ್ಬರ ಫೋಟೋ ಹಂಚಿಕೊಂಡಿದೆ. ಚಿತ್ರದಲ್ಲಿ ರಾಹುಲ್ ಗಾಂಧಿ ಹಾಗೂ ವಿಜೇಂದರ್ ಸಿಂಗ್ ಮೀಸೆಗಳನ್ನು ತಿರುಗಿಸುತ್ತಿರುವುದು ಕಂಡುಬಂದಿದೆ.

ಮೂಲತಃ ಹರಿಯಾಣದ ಭಿವಾನಿ ಜಿಲ್ಲೆಯವರಾದ ವಿಜೇಂದರ್ ಸಿಂಗ್ , ಕಳೆದ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ದೆಹಲಿಯಿಂದ ಸ್ಪರ್ಧಿಸಿದ್ದರು. 2008 ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಇದು ಒಲಿಂಪಿಕ್ ಪದಕವನ್ನು ಗೆದ್ದ ಮೊದಲ ಭಾರತೀಯ ಬಾಕ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಅವರು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಎರಡು ಬೆಳ್ಳಿ ಮತ್ತು ಒಂದು ಕಂಚು ಹೊಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!