Sunday, October 1, 2023

Latest Posts

ಇಂದು ಸಂಜೆ 6 .04 ಕ್ಕೆ ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್: ಇಸ್ರೋ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ಗೆ ಕ್ಷಣಗಣನೆ ಬಾಕಿ ಉಳಿದಿದ್ದು, ಇಂದು ಸಂಜೆ 6 .04 ಕ್ಕೆ ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ಆಗಲಿದೆ ಎಂದು ಇಸ್ರೋ ಸ್ಪಷ್ಟನೆ ನೀಡಿದೆ.

ಸ್ವಯಂಚಾಲಿತ ಲ್ಯಾಂಡಿಂಗ್ ಸೀಕ್ವೆನ್ಸ್ ಪ್ರಾರಂಭಕ್ಕೆ ಎಲ್ಲವೂ ಸಿದ್ಧವಾಗಿದೆ. ಸಂಜೆ 5 ಗಂಟೆ 44 ನಿಮಿಷ ಸುಮಾರಿಗೆ ಗೊತ್ತುಪಡಿಸಿದ ಸ್ಥಳದಲ್ಲಿ ಲ್ಯಾಂಡರ್ ಮಾಡ್ಯೂಲ್ ಆಗಮನದ ನಿರೀಕ್ಷೆಯಿದೆ.ಕಾರ್ಯಾಚರಣೆಯ ನೇರ ಪ್ರಸಾರ ಸಂಜೆ 5.20ರಿಂದ ಆರಂಭವಾಗಲಿದೆ. ಸಂಜೆ 6 ಗಂಟೆ 4 ನಿಮಿಷಕ್ಕೆ ವಿಕ್ರಮ್ ಲ್ಯಾಂಡರ್ ಚಂದಿರನನ್ನು ಸ್ಪರ್ಶ ಮಾಡಲಿದೆ ಎಂದು ಇಸ್ರೋ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!