ಶ್ರೀಲಂಕಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವಿಕ್ರಮ ಸಿಂಘೇ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರನೀಲ್‌ ವಿಕ್ರಮ ಸಿಂಘೇ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆ ದ್ವೀಪರಾಷ್ಟ್ರದಲ್ಲಿನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಇತರನ್ನು ಹಿಂದಿಕ್ಕಿ ಗೆಲುವು ಸಾಧಿಸುವ ಮೂಲಕ ವಿಕ್ರಮಸಿಂಘೇ ಲಂಕೆಯ 9ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ಸಿಂಘೇ ಅವರನ್ನು ಬೆಂಬಲಿಸಿ 134 ಸದ್ಯರುಮತ ಚಲಾಯಿಸಿದ್ದರು. ಗೋಟಬಾಯಾ ರಾಜೀನಾಮೆಯ ನಂತರ ನಡೆದ ರಾಜಕೀಯ ಹೈಡ್ರಾಮಾದ ನಡುವೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಿಂಘೇ ಅವರು ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದು ಇನ್ನೂ ಒಂದು ವರ್ಷಗಳ ಅಧಿಕಾರಾವಧಿ ಹೊಂದಿದ್ದಾರೆ.

ಅವರ ವಿರುದ್ಧ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದರೂ ಪ್ರಸ್ತುತ ಚುನಾವಣೆಯಲ್ಲಿ ಗೆಲುವು ಸಾಧಿಸಿವ ಮೂಲಕ ವಿಕ್ರಮ ಸಿಂಘೇ ಅಧಿಕಾರವನ್ನು ಭದ್ರಪಡಿಸಿಕೊಂಡಿದ್ದಾರೆ. ಶ್ರೀಲಂಕಾವನ್ನು ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಲು ಎಲ್ಲಾ ಪಕ್ಷಗಳೊಂದಿಗೆ ಕೆಲಸ ಮಾಡುವುದಾಗಿ ಅವರು ಪ್ರತಿಪಕ್ಷಗಳಿಗೆ ಭರವಸೆ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!