ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗಷ್ಟೆ ಕಿಚ್ಚ ಸುದೀಪ ನಟನೆಯ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಫೆ.24ಕ್ಕೆ ಬಿಡುಗಡೆಯಾಗುತ್ತೆ ಎಂದು ಎಲ್ಲೆಡೆ ಸುದ್ದಿಯಾಗಿತ್ತು.
ಆದರೆ ಈಗ ಚಿತ್ರತಂಡ ಅಭಿಮಾನಿಗಳಿಗೆ ಬೇಸರದ ಸುದ್ದಿಯೊಂದನ್ನು ನೀಡಿದೆ. ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಸಿನಿಮಾ ರಿಲೀಸ್ ದಿನಾಂಕ ಮುಂದೂಡಲಾಗಿದೆ ಎಂದು ಪೋಸ್ಟ್ ಮಾಡಿದ್ದಾರೆ. ಫೆ.24ಕ್ಕೆ ನಿಮ್ಮೆದುರು ಚಿತ್ರಮಂದಿರಗಳಲ್ಲಿ ಬರುವ ಆಸೆ ಇದ್ದರೂ ಈಗಿನ ಕೋವಿಡ್ ನಿಯಮಗಳಿಂದ ಬರಲು ಸಾಧ್ಯವಾಗುತ್ತಿಲ್ಲ. ನಿಮ್ಮ ತಾಳ್ಮೆಗೆ ಧನ್ಯವಾದಗಳು. ಶೀಘ್ರದಲ್ಲಿ ಹೊಸ ರಿಲೀಸ್ ಡೇಟ್ ನೊಂದಿಗೆ ನಿಮ್ಮೆದುರು ಬರಲಿದ್ದೇವೆ. ಹೊಸ ನಾಯಕನನ್ನು ನೀವು ಈ ಸಿನಿಮಾದಲ್ಲಿ ನೋಡಲಿದ್ದೀರಿ ಎಂದು ಟ್ವೀಟ್ ಮಾಡಿದ್ದಾರೆ.
ವಿಕ್ರಾಂತ್ ರೋಣ ಚಿತ್ರಕ್ಕೆ ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ನಿರೂಪ್ ಭಂಡಾರಿ, ನೀತಾ ಅಶೋಕ್, ಜಾಕ್ವೆಲಿನ್ ಫರ್ನಾಂಡಿಸ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.